bpl cancelled: ಪಡಿತರ ಕುರಿತು ಆದೇಶ ಹೊರಡಿಸಿದ ಆಹಾರ ಇಲಾಖೆ

(bpl cancelled) ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ


ಆದೇಶದಲ್ಲಿ ಏನಿದೆ?;
1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ.
2. ನೋಡಲ್ ಅಧಿಕಾರಿ ರವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು, ಮೇಲ್ವಿಚಾರಣೆಯನ್ನು ಮಾಡುವುದು.
3. ಹೀಗೆ ಮುರುಸ್ತಾಪನೆಗೊಂಡಿರುವ PHH ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು NIC ಸಹಯೋಗದೊಂದಿಗೆ ದಿನಾಂಕ: 25/11/2024 ರೊಳಗೆ ಜಂಟಿ ನಿರ್ದೇಶಕರು (ಸಂ.ವಿ) ರವರು ಕ್ರಮವಹಿಸಬೇಕು.
4. ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತ್ತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ರವರು ಕ್ರಮವಹಿಸತಕ್ಕದ್ದು, ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸುವುದು.
5. ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ಕ್ರಮ ವಹಿಸುವುದು.
6. ದಿನಾಂಕ: 25/11/2024 ರೊಳಗೆ ಮೂರ್ಣಗೊಳಿಸತಕ್ಕದ್ದು ಎಂಬುದಾಗಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.

bpl cancelled: ಪಡಿತರ ಕುರಿತು ಆದೇಶ ಹೊರಡಿಸಿದ ಆಹಾರ ಇಲಾಖೆ
bpl cancelled: ಪಡಿತರ ಕುರಿತು ಆದೇಶ ಹೊರಡಿಸಿದ ಆಹಾರ ಇಲಾಖೆ

ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು