(BPL Cardholders:) ಬೆಂಗಳೂರು: ರಾಜ್ಯದಲ್ಲಿ ಅರ್ಹತೆ ಇಲ್ಲದಿದ್ದರೂ ಬಿಪಿಎಲ್ (BPL) ಪಟ್ಟಿಯಲ್ಲಿ ಹೆಸರು ಹೊಂದಿರುವ ಲಕ್ಷಾಂತರ ಕಾರ್ಡ್‌ದಾರರನ್ನು ಹಂತ ಹಂತವಾಗಿ ಎಪಿಎಲ್ (APL) ಪಟ್ಟಿಗೆ ವರ್ಗಾಯಿಸುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಮೀರಿ ಸುಮಾರು 7 ಲಕ್ಷ ಎಪಿಎಲ್ ಕಾರ್ಡ್‌ದಾರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ಪರಿಶೀಲನೆ ನಡೆಸಿ ಅನರ್ಹರನ್ನು ಗುರುತಿಸಿ ಎಪಿಎಲ್ ಪಟ್ಟಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಆದರೆ, ಯಾವುದೇ ಕಾರಣಕ್ಕೂ ಅರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ತಾಂತ್ರಿಕ ದೋಷಗಳು ಅಥವಾ ತಪ್ಪುಗಳಿಂದ ಅರ್ಹರಾಗಿದ್ದರೂ ಬಿಪಿಎಲ್ ಪಟ್ಟಿಯಿಂದ ಹೆಸರು ಕೈಬಿದ್ದಿದ್ದರೆ, ಅಂತಹವರು ಸಂಬಂಧಿತ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಪರಿಶೀಲಿಸಿ ಅವರಿಗೆ ಮರುಬಾರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದೇ ವೇಳೆ ಆಟೋ ಚಾಲಕರ ಸಂಕಷ್ಟದ ಕುರಿತು ಪ್ರತಿಕ್ರಿಯಿಸಿದ ಅವರು, ಆಟೋ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ‘ಆಟೋ ಗ್ಯಾಸ್’ ಅನ್ನು ಆದ್ಯತೆ ಮೇರೆಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಹೇಳಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (BPL Cardholders:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply