Ration Card ; BPL ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

Ration Card ; ರೇಷನ್ ಕಾರ್ಡ್ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿದಿದೆ ಎಂದು ಬೇಸರದಲ್ಲಿ ಇದ್ದ ಜನರಿಗೆ ಇದೊಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗುತ್ತದೆ.

ಇದನ್ನೂ ಓದಿ; ಕೊಪ್ಪ: 14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಡೆತ್ ನೋಟ್ ನಲ್ಲಿ ಸಿಕ್ತು ಆಘಾತಕಾರಿ ಅಂಶ

ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ ಬೆಳಂಬೆಳಗ್ಗೆಯೇ ಠಿಕಾಣಿ ಹೂಡುತ್ತಿದ್ದಾರೆ. ಹಾಗಾಗಿ ಪಡಿತರ ಚೀಟಿಯ ತಿದ್ದುಪಡಿಗೆ ಸರ್ಕಾರವು ಅವಕಾಶವನ್ನು ಒದಗಿಸಿಕೊಟ್ಟಿದೆ.

ಇದನ್ನೂ ಓದಿ; ಕಳ್ಳಸಾಗಣೆ ಮಾಡುತ್ತಿದ್ದ 4.8 ಕೋಟಿ ಮೌಲ್ಯ ಅಡಿಕೆ ವಶ

ನಿಮ್ಮ ಪಡಿತರ ಚೀಟಿಯಲ್ಲಿ ಏನಾದರೂ ತಪ್ಪುಗಳಿದ್ದು ಗೃಹಲಕ್ಷ್ಮಿ ಅಥವಾ ಇನ್ನಿತರ ಗ್ಯಾರಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದ್ದರೆ, ಈಗ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.

Ration Card ;
Ration Card ;

ರೇಷನ್ ಕಾಡ್ ತಿದ್ದುಪಡಿಗೆ ಎಲ್ಲಿಯವರೆಗೆ ಅವಕಾಶ:
ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು . ಸೆ.1ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಎಲ್ಲಿ ತಿದ್ದುಪಡಿ ಮಾಡಿಸಬೇಕು?:
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ; ಈ ಲಿಸ್ಟ್‌ ನಲ್ಲಿ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ

ರೇಷನ್ ಕಾರ್ಡ್ ತಿದ್ದುಪಡಿಗೆ ಸಮಯ ಎಷ್ಟು?:
ಇನ್ನು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿಗೆ ಸಮಯವನ್ನು ನಿಗದಿಪಡಿಸಿದ್ದು, ಬೆಳಗ್ಗೆ 10ರಿಂದ ಸಂಜೆ 6 ಗಂಟೆಯ ಒಳಗಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಇದೆ.

Ration Card ; ರೇಷನ್ ಕಾರ್ಡ್ನಲ್ಲಿ ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?:
* ಫಲಾನುಭವಿ ಹೆಸರು ಬದಲಾವಣೆ
* ಪಡಿತರ ಕೇಂದ್ರ ಬದಲಾವಣೆ
* ಕಾರ್ಡ್ ಸದಸ್ಯರ ಹೆಸರು ಡಿಲಿಟ್, ಸೇರ್ಪಡೆ
* ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
* ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ

ಇದನ್ನೂ ಓದಿ; ಜಲಪಾತ ಸಿನಿಮಾದಲ್ಲಿ ಅಭಿನಯಿಸಿರುವ ಪ್ರಮೋದ್ ಅವರ ಲುಕ್ ರಿವಿಲ್; ಪೋಸ್ಟರ್ ನೋಡಿ ಫೀದಾ ಆದ ಪ್ರಮೋದ್ ಧರ್ಮಪತ್ನಿ

ದಾಖಲೆಗಳು ಯಾವುದೆಲ್ಲಾ ಬೇಕು:
* ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ?:
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು
ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಇದನ್ನೂ ಓದಿ; ಚಿಕ್ಕಮಗಳೂರು: ಯಮಸ್ವರೂಪಿಯಾದ ರಸ್ತೆ ಗುಂಡಿ; ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ

* https://ahara.kar.nic.in/home ಲಾಗಿನ್ ಆಗಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್ ನಲ್ಲಿ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿ
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.