BSNL Recruitment 2026: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ

BSNL Recruitment 2026: ನಿರುದ್ಯೋಗಿ ಯುವಕರು ಸರ್ಕಾರಿ ವಲಯದಲ್ಲಿ ವೃತ್ತಿ ಜೀವನ ಹೊಂದುವ ಕನಸನ್ನು ಕಾಣುತ್ತಿರುವವರಿಗೆ ಬಿಎಸ್‌ಎನ್‌ಎಲ್ ಈಗ ನಿಮ್ಮ ಕನಸಿಗೆ ಜೊತೆಯಾಗಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಸ ಸದುಪಯೋಗ ಪಡೆದುಕೊಳ್ಳಿ.

ಬಿಎಸ್‌ಎನ್‌ಎಲ್ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಟೆಲಿಕಾಂಗೆ ಬಿ.ಇ/ಬಿ.ಟೆಕ್, ಹಣಕಾಸಿಗೆ ಸಿಎ/ಸಿಎಂಎ ಅರ್ಹತೆ ಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕ. ಆಯ್ಕೆ ಆನ್‌ಲೈನ್ ಪರೀಕ್ಷೆ ಮೂಲಕ ನಡೆಯಲಿದ್ದು, 24,900 ಯಿಂದ 50,500 ರೂ. ವೇತನ ಲಭ್ಯ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ಅರ್ಹತೆಗಳು:
* ಟೆಲಿಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಶೇ.60 ಅಂಕಗಳೊಂದಿಗೆ BE ಪದವಿ ಪಡೆದಿರಬೇಕು.
* ಹಣಕಾಸು ಹುದ್ದೆಗಳಿಗೆ CA ಅಥವಾ CMA ಅರ್ಹತೆ ಕಡ್ಡಾಯ.
* ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿತ ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ:
* ಅಭ್ಯರ್ಥಿಗಳ ವಯಸ್ಸು 21ರಿಂದ 30 ವರ್ಷಗಳೊಳಗಿರಬೇಕು.
* OBC ಅಭ್ಯರ್ಥಿಗಳಿಗೆ 3 ವರ್ಷ
* SC/ST ಅಭ್ಯರ್ಥಿಗಳಿಗೆ 5 ವರ್ಷ
* PwBD ಅಭ್ಯರ್ಥಿಗಳಿಗೆ ಗರಿಷ್ಠ 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
* ಅರ್ಜಿ ಶುಲ್ಕವಾಗಿ ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು: 2,500ರೂ.
* SC, ST ಮತ್ತು PwBD ಅಭ್ಯರ್ಥಿಗಳು: 1,250ರೂ.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಆಯ್ಕೆ ಪ್ರಕ್ರಿಯೆ:
* ಆಯ್ಕೆ ಆನ್‌ಲೈನ್ ಲಿಖಿತ ಪರೀಕ್ಷೆಯ ಆಧಾರವಾಗಿರುತ್ತದೆ.

ವೇತನ:
ಆಯ್ಕೆಯಾದವರಿಗೆ ತಿಂಗಳಿಗೆ 24,900ರಿಂದ 50,500 ರೂ. ರವರೆಗೆ ವೇತನ ನೀಡಲಾಗುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7 ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ. ಅರ್ಜಿ ತಿದ್ದುಪಡಿ ಮಾರ್ಚ್ 8ರಿಂದ ಮಾರ್ಚ್ 15ರವರೆಗೆ ಅವಕಾಶವಿದೆ. ಲಿಖಿತ ಪರೀಕ್ಷೆ ಮಾರ್ಚ್ 29 ರಂದು ನಡೆಯಲಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

BSNL Recruitment 2026: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ
BSNL Recruitment 2026: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (BSNL Recruitment 2026:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ