Budget 2026: ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಪಿಕ್ಸ್

Budget 2026: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮುಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.

14 ವರ್ಷ ಹೆಣ್ಣು ಮಕ್ಕಳಿಗೆ ನೀಡುವ ಲಸಿಕೆ:  ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಲಾಗುತ್ತದೆ.

ಬಾಗಲಕೋಟೆ ತೋಟಗಾರಿಕೆ ವಿವಿಯಲ್ಲಿ ಜೀನ್ ಬ್ಯಾಂಕ್ : 11.12 ಕೋಟಿ ವೆಚ್ಚದಲ್ಲಿ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ. ಪ್ರತಿ ಬೆಳೆಗೆ ಒಂದು ಜೀನ್ ಇರುತ್ತದೆ. ದೇಶಿ ತಳಿಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದರು.

ದ್ರಾಕ್ಷಾರಸ ಶಿತಲೀಕರಣ ಘಟಕದ ನಿರ್ಮಾಣ: ತಿಕೋಟಾದಲ್ಲಿ ಘಟಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 12.40 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಬೆಡ್ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 330.50 ಕೋಟಿ ಮೊತ್ತದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂದರು.


ನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ


ಶಿಷ್ಟಾಚಾರ ನಿಯಮಗಳಿಗೆ ಘಟನೋತ್ತರ ಅನುಮೋದನೆ: ಶಾಸಕರನ್ನ ಅಧ್ಯಕ್ಷರನ್ನಾಗಿ ಮಾಡುವ ನಿಯಮ ಇದಾಗಿದೆ. ನ್ಯಾಯಾಲಯಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಇದಾಗಿದೆ.

ಕಲ್ಲುಗಣಿ ಗುತ್ತಿಗೆ ಒತ್ತುವರಿಗೆ ದಂಡ: ಒನ್ ಟೈಮ್ ಸೆಟಲ್ ಮೆಂಟ್‌ ಗೆ ಅವಕಾಶ ನೀಡಲಾಗುತ್ತಿದೆ. ಗಣಿ ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆ ಸೂಚಿಸಲಾಗಿದೆ.
ರಾಯಲ್ಟಿ ಪೇ ಮಾಡದೆ ಅಕ್ರಮ ಸಾಗಾಟ: ಒತ್ತುವರಿ ಮಾಡಿಕೊಂಡವರಿಗೆ ಪೆನಾಲ್ಟಿ ವಿಧಿಸಲಾಗುತ್ತದೆ. ಒಟಿಎಸ್ ಮೂಲಕ ಸೆಟಲ್ ಮೆಂಟ್ ಮಾಡಬೇಕು. ಒಂದೇ ಬಾರಿಗೆ ದಂಡ ಕಟ್ಟಿದರೆ ತೆರಿಗೆ ವಿನಾಯ್ತಿ ನೀಡಲಾಗುತ್ತಿದೆ ಎಂದರು.

ಜಿಬಿಎ ವ್ಯಾಪ್ತಿಯ 4 ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಎಬಿಎಆ‌ರ್ ಕೆ ಯೋಜನೆಯಡಿ 2ಎ ಚಿಕಿತ್ಸಾ ವಿಧಾನಕ್ಕೆ ವಿನಾಯ್ತು ನೀಡಲು ನಿರ್ಧರಿಸಲಾಗಿದೆ. ಸೇಂಟ್ ಜಾನ್ಸ್ ರಾಮಯ್ಯ, ಕಿಮ್ಸ್, ಅಂಬೇಡ್ಕರ್ ಕಾಲೇಜುಗಳಿಗೆ ಅನ್ವಯಿಸಲಿದೆ ಎಂದು ತಿಳಿಸಿದರು.

ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿ: ಮಾರ್ಚ್.6ರಿಂದ ಬಜೆಟ್ ಅಧಿವೇಶ ನಡೆಯಲಿದೆ. ಮಾರ್ಚ್‌.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲಿದ್ದಾರೆ. ಮಾರ್ಚ್.27ರವರೆಗೆ ಬಜೆಟ್ ಅಧಿವೇಶ ನಡೆಯಲಿದೆ. 14 ದಿನಗಳ ಕಾಲ ಬಜೆಟ್ ಅಧಿವೇಶ ನಡೆಸಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಬೆಂಗಳೂರಿನ ರೇಸ್ ಕೋರ್ಸ್ ಶಿಫ್ಟ್ ನಿರ್ಧಾರ: ಬೆಂಗಳೂರಿನಿಂದ ಕುಣಿಗಲ್ ಗೆ ರೇಸ್ ಕೋರ್ಸ್ ಶಿಫ್ಟ್ ಆಗಲಿದೆ. ಕುಣಿಗಲ್ ನ ಸ್ಟಡ್ ಫಾರ್ಮ್ ಗೆ ಶಿಫ್ಟ್ ಮಾಡಲಾಗುತ್ತಿದೆ. ಶಿಫ್ಟ್ ನಲ್ಲಿ ಉದ್ಯಾನ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಲೀಸ್‌ ಅವಧಿ ಮುಕ್ತಾಯ,ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರ ಮಾಡಲಾಗುತ್ತಿದೆ ಎಂದರು.


ನ್ನೂ ಓದಿ: ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ


ಶಾಲಾ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣೆ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು 104 ಕೋಟಿ ವೆಚ್ಚದಲ್ಲಿ ಖರೀದಿಗೆ ಸಂಪುಟ ಒಪ್ಪಿಗೆ ನೀಡಲಾಗಿದೆ. ವಿದ್ಯಾವಿಕಾಸ ಯೋಜನೆಯಡಿ ವಿತರಣೆ ಮಾಡಲಾಗುತ್ತಿದೆ.
ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ: ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಣೆಗೆ ನಿರ್ಧರಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ವಿತರಣೆ ಮಾಡಲಿದೆ. ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಆಡಿಸಲು ಅನುಮತಿ: ಆರ್ ಸಿಬಿ ಪಂದ್ಯಗಳನ್ನ ವೀಕ್ಷಿಸಲು ಅವಕಾಶ ನೀಡಲಾಗುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಿದೆ. ಕೆಲವು ಷರತ್ತುಗಳು ವಿಧಿಸಿ ಅವಕಾಶ ನೀಡಲಾಗಿದೆ. ಷರತ್ತುಗಳ ವಿಧಿಸುವ ಅವಕಾಶ ಗೃಹ ಇಲಾಖೆಗೆ ನೀಡಲಾಗಿದೆ. ನಾಳೆ, ನಾಡಿದ್ದು ಗೃಹ ಇಲಾಖೆಯಿಂದ ಆದೇಶ ಹೊರಬೀಳಲಿದೆ.

ಎಸ್ ಐಆರ್ ಬಗ್ಗೆ ಗಂಭೀರ ಚರ್ಚಯಾಗಿದೆ. ಕಾನೂನಾತ್ಮಕ ವಿಚಾರಗಳ ಚರ್ಚೆಯಾಗಿದೆ. ಆಳವಾದ ಅಧ್ಯಯನದ ಅಗತ್ಯವಿದೆ. ವರದಿ ನೀಡುವಂತೆ ಕಾನೂನು ಇಲಾಖೆಗೆ ಸೂಚಿಸಿದೆ. ನಮ್ಮ ಇಲಾಖೆ ಅಧ್ಯಯನ ಮಾಡಿ ವರದಿ ಸಲ್ಲಿಸಲಿದೆ ಎಂದು ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದರು.

Budget 2026: ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಪಿಕ್ಸ್
Budget 2026: ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಪಿಕ್ಸ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Budget 2026:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ