ಹಾವೇರಿ: ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದ ಬಳಿ ನಡೆದಿದೆ.
ಕಮಲಮ್ಮ ಕಾಸಂಬಿ (55 ) ಮೃತರಾಗಿದ್ದಾರೆ. ಇವರು ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಮಗನೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದ ಸಮಯದಲ್ಲಿಎದುರಿಗೆ ಸಾರಿಗೆ ಬಸ್ ಬಂದಿದ್ದು, ಬಸ್ ನಿಂದ ತಪ್ಪಿಸಿಕೊಳ್ಳಲು ಹೋದ ವೇಳೆ ತಮ್ಮ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ಸಮಯದಲ್ಲಿ ಕಮಲಮ್ಮಳ ತಲೆಯ ಮೇಲೆ ಬಸ್ ಹರಿದು ಹೋಗಿದ್ದರಿಂದ ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅದೃಷ್ಟವಶಾತ್ ಕಮಲಮ್ಮಳ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.