(Caste-Income Certificate:) ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಸೇವೆಗಳನ್ನು ಇನ್ನಷ್ಟು ಹತ್ತಿರಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದುವರೆಗೆ ಅಟಲ್ ಜೀ ಜನಸ್ನೇಹಿ ಕೇಂದ್ರಗಳು (ನಾಡ ಕಚೇರಿ) ಮೂಲಕ ಮಾತ್ರ ಲಭ್ಯವಿದ್ದ ಕೆಲವು ಪ್ರಮುಖ ಸೇವೆಗಳು ಈಗಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ದೊರೆಯಲಿವೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ಈ ಹೊಸ ವ್ಯವಸ್ಥೆಯ ಮೂಲಕ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಹಿಂದುಳಿದ ವರ್ಗಗಳ (OBC) ಜಾತಿ ಪ್ರಮಾಣಪತ್ರಗಳಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಗ್ರಾಮೀಣ ಜನರು ತಾಲ್ಲೂಕು ಕಚೇರಿ ಅಥವಾ ನಾಡ ಕಚೇರಿಗಳಿಗೆ ತೆರಳಿ ಅಲೆದಾಡುವ ಅವಶ್ಯಕತೆ ಕಡಿಮೆಯಾಗಲಿದೆ.
ಅಗತ್ಯವಿರುವ ದಾಖಲೆಗಳು:
* ರೇಷನ್ ಕಾರ್ಡ್ (ಪಡಿತರ ಚೀಟಿ)
* ಆಧಾರ್ ಕಾರ್ಡ್
* ಮತದಾರರ ಗುರುತಿನ ಚೀಟಿ (Voter ID)
* ಶಾಲಾ ವರ್ಗಾವಣೆ ಪ್ರಮಾಣ ಪತ್ರ (Transfer Certificate)
* ವಂಶವೃಕ್ಷ (ಗ್ರಾಮ ಲೆಕ್ಕಿಗರಿಂದ ಪಡೆದದ್ದು – ಐಚ್ಛಿಕ)
* ವೇತನ ಚೀಟಿ ಅಥವಾ ಆದಾಯ ತೆರಿಗೆ ಪಾವತಿ ದಾಖಲೆ (ಆದಾಯ ಪ್ರಮಾಣ ಪತ್ರಕ್ಕಾಗಿ)
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಗ್ರಾಮ ಲೆಕ್ಕಿಗರು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ. ನಂತರ ಈ ವರದಿಯನ್ನು ಕಂದಾಯ ನಿರೀಕ್ಷಕರು (Revenue Inspector) ಪರಿಶೀಲಿಸಿ ಅನುಮೋದಿಸಿದ ಬಳಿಕ ಅಧಿಕೃತ ಪ್ರಮಾಣಪತ್ರ ವಿತರಿಸಲಾಗುತ್ತದೆ.
ಅರ್ಜಿ ಶುಲ್ಕ:
ಈ ಸೇವೆಗೆ ಸರ್ಕಾರ ಕೇವಲ ರೂ. 40/- ಗಳ ನಿಗದಿತ ಶುಲ್ಕವನ್ನು ನಿಗದಿಪಡಿಸಿದೆ.
ಈ ಹೊಸ ವ್ಯವಸ್ಥೆಯಿಂದ ಗ್ರಾಮೀಣ ಜನರಿಗೆ ಸರ್ಕಾರದ ಪ್ರಮುಖ ಸೇವೆಗಳು ತಮ್ಮ ಗ್ರಾಮದಲ್ಲೇ ಸುಲಭವಾಗಿ ದೊರೆಯಲಿದ್ದು, ಸಮಯ ಮತ್ತು ಪ್ರಯಾಣ ವೆಚ್ಚವೂ ಉಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Caste-Income Certificate:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply