CBI Recruitment 2026: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ವಿದೇಶಿ ವಿನಿಮಯ ಮತ್ತು ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನದಲ್ಲಿ ಆಸಕ್ತಿ ಹೊಂದಿರುವ ಯುವಜನತೆಗೆ ಸುವರ್ಣ ಅವಕಾಶವಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 350 ಹುದ್ದೆಗಳನ್ನು ಅರ್ಜಿ ಆಹ್ವಾನಿಸಿದೆ. ಅರ್ಜಿಯ ಪ್ರಕ್ರಿಯೆ ಆನ್‌ಲೈನ್ ಮೂಲಕವೇ ನಡೆಯಲಿದ್ದು, ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ centralbank.bank.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 175 ರೂ. ಮಾತ್ರ ಶುಲ್ಕ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ ಯಾವುದೇ ವಿಭಾಗದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ, ಮುಖ್ಯವಾಗಿ CFA, CA, MBA ಸೇರಿದಂತೆ ಸಂಬಂಧಿತ ವೃತ್ತಿಪರ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು, ಪದವಿಯ ನಂತರ MBA, ಪಿಜಿ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್, ಬಿಸಿನೆಸ್ ಮ್ಯಾನೇಜ್ಮೆಂಟ್, ಬಿಸಿನೆಸ್ ಅನಾಲಿಟಿಕ್ಸ್ ಅಥವಾ ಸಮಾನ ಸ್ನಾತಕೋತ್ತರ ಅರ್ಹತೆಗಳನ್ನು ಹೊಂದಿರಬೇಕು.
ಆಯ್ಕೆಯ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಒಟ್ಟು 100 ಪ್ರಶ್ನೆಗಳಿದ್ದು, ಗರಿಷ್ಠ 100 ಅಂಕಗಳಿರುತ್ತವೆ. ಪರೀಕ್ಷೆಯ ಅವಧಿ 2 ಗಂಟೆಗಳಾಗಿರುತ್ತದೆ. ಅರ್ಹತಾ ಅಂಕಗಳು ಸಾಮಾನ್ಯ ಹಾಗೂ ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ಶೇ.50 ಆಗಿದ್ದು, ಎಸ್‌ಸಿ/ಎಸ್‌ಟಿ/ಒಬಿಸಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶೇ.45 ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆಯನ್ನು ಫೆಬ್ರವರಿ ಅಥವಾ ಮಾರ್ಚ್ 2026 ರಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುತ್ತದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಜನವರಿ 20 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ.ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 3 ಕೊನೆಯ ದಿನಾಂಕ. ಆಗಿರುವುದರಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (CBI Recruitment 2026:)
-
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ





