chaitra kundapur: ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂ.ಎಲ್.ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ ಸುದಿನ ಎಂಬವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ, ಸುಮಾರು ಐದು ಲಕ್ಷ ರೂ. ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಹಣವನ್ನು ಮರಳಿಸದೆ, ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ಇದನ್ನೂ ಓದಿ; ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
ಪ್ರಕರಣದ ವಿವರ;
ಸುದಿನ ಎಂಬವರು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015 ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ, ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದಿನ ಅವರಿಂದ 2018 ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿರುತ್ತಾಳೆ. ಸುಮಾರು 3 ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ (chaitra kundapur:)ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು. ಅಂಗಡಿಯ ಬಗ್ಗೆ ಚೈತ್ರಾಳಲ್ಲಿ ಕೇಳಿದಾಗ ಆಕೆ ಪ್ರತಿ ಬಾರಿಯೂ ಅಂಗಡಿ ಹಾಕುವ ಬಗ್ಗೆ ಈಗಾಗಲೇ ಸ್ಥಳೀಯ ಮುಖಂಡರಲ್ಲಿ ಮಾತುಕತೆ ನಡೆಸಿದ್ದು, ಅಂತಿಮ ಹಂತದಲ್ಲಿರುವುದಾಗಿ ನಂಬಿಸಿದ್ದಳು.

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನAತರದ ದಿನಗಳಲ್ಲಿ ಆಕೆಯು ಚುನಾವಣಾ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ, ದಿನಗಳನ್ನು ಮುಂದೂಡುತ್ತಾ ಬರುತ್ತಿದ್ದು ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿರುತ್ತಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ; ಹೇಗಿದೆ ಇಂದಿನ ಚಿನ್ನ, ಬೆಳ್ಳಿ ದರ?; ಇಲ್ಲಿದೆ ಇಂದಿನ ದರ -17.09.2023
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದಿನ ಅವರು ನನಗೆ ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ನಾನು ನೀಡಿದ ಹಣವನ್ನು ಸಂಪೂರ್ಣವಾಗಿ ವಾಪಾಸು ನೀಡುವಂತೆ ಕೇಳಿಕೊಂಡರು. ಆಗ ಚೈತ್ರಾಳು ಸುದಿನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣವನ್ನು ದಾಖಲಿಸುವುದಾಗಿ ಹಾಗೂ ಬಾಡಿಗೆ ಗೂಂಡಾಗಳಿAದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನು ಹಾಕಿದ್ದಳು. ಇತ್ತೀಚೆಗೆ ಚೈತ್ರಾಳು ಇನ್ನಷ್ಟು ಜನರಿಗೆ ವಂಚಿಸಿದ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ನನಗೆ ಮೋಸ ಮಾಡಿ, ನನ್ನಿಂದ ಹಣವನ್ನು ಲಪಟಾಯಿಸುವ ಉದ್ದೇಶದಿಂದ ನನಗೆ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ನಂಬಿಸಿ ನನ್ನಿಂದ ಸುಮಾರು ಐದು ಲಕ್ಷ ರೂಪಾಯಿ ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ, ಹಣವನ್ನು ವಾಪಾಸು ನೀಡದೆ, ಹಣವನ್ನು ಕೇಳಿದ ನನಗೆ ಜೀವ ಬೆದರಿಕೆಯನ್ನು ಹಾಕಿದ್ದಾಳೆ ಎಂದು ಸುದೀನ ಕೋಟ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ