Tuesday, November 28, 2023
Homeಮಲೆನಾಡುಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ : ಬರೋಬ್ಬರಿ 3 ಕಿ ಮೀ ಸಾಲುಗಟ್ಟಿ ನಿಂತ ವಾಹನಗಳು

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ : ಬರೋಬ್ಬರಿ 3 ಕಿ ಮೀ ಸಾಲುಗಟ್ಟಿ ನಿಂತ ವಾಹನಗಳು

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆ ಎರಡೂ ಕಡೆಯಿಂದ ಹೊರಟ ನೂರಾರು ವಾಹನಗಳು ಗಂಟೆಗಟ್ಟಲೇ ಸುಮಾರು ಮೂರ್ನಾಲ್ಕು ಕಿ.ಮೀ. ಸಾಲುಗಟ್ಟಿ ನಿಂತು, ಟ್ರಾಫಿಕ್ ಜಾಮ್ ಆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಎರಡು ಜಿಲ್ಲೆಯಿಂದ ಹೊರಟಂತಹ ನೂರಾರು ವಾಹನಗಳಿಂದ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಿರಿದಾದ ರಸ್ತೆಯಲ್ಲಿ ಹೀಗೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದರಿಂದ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದಲ್ಲಿರುವಂತಹ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾತ್ರದ ಲಾರಿ-ಬಸ್ಸುಗಳು ಸಂಚರಿಸಲು ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜಿಲ್ಲಾಡಳಿತ ನಿರ್ಬಂಧವನ್ನು ವಿಧಿಸಿದ್ದರೂ ಕೂಡ ಕಿರಿದಾದ ರಸ್ತೆಯಲ್ಲಿ ದೊಡ್ಡದಾದ ಲಾರಿ, ಬಸ್ಸುಗಳು ಚಲಿಸುತ್ತಲೇಯಿದೆ ಹಾಗಾಗಿ ಕೊಟ್ಟಿಗೆಹಾರದ ಆರಂಭದಿAದ ಚಾರ್ಮಾಡಿ ಘಾಟ್ ವರೆಗೂ ಸುಮಾರು ಮೂರ್ನಾಲ್ಕು ಕಿ.ಮೀ. ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು, ಪ್ರಯಾಣಿಕರು ಪರದಾಡುವಂತಾಯಿತು.

ಕಳೆದ ಏಳೆಂಟು ದಿನಗಳ ಹಿಂದೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಸಣ್ಣದಾಗಿ ಕುಸಿದಿತ್ತು. ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಭಾರೀ ವಾಹನಗಳಿಗೆ ನಿಷೇಧವನ್ನು ಹೇರಿದ್ದರು ಹಾಗೂ ಸಂಜೆ 7 ರಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಹೇರಿತ್ತು. ಆದರೂ ಕೆಲ ದೊಡ್ಡ ದೊಡ್ಡ ವಾಹನಗಳು ಸಂಚಾರ ಮಾಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೇ ಪರದಾಡಿದ್ದಾರೆ.

Most Popular

Recent Comments