Sunday, October 1, 2023
Homeಬಯಲುಸೀಮೆಬಾಲಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ವಶ - 59 ಬಾಲಕಾರ್ಮಿಕರ ರಕ್ಷಣೆ

ಬಾಲಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ವಶ – 59 ಬಾಲಕಾರ್ಮಿಕರ ರಕ್ಷಣೆ

ರಾಯಚೂರು: ಸರ್ಕಾರ 14 ವರ್ಷದವರೆಗೆ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಬೇಕು. 14 ವರ್ಷ ಕೆಳಗಿನ ವಯಸ್ಸಿನ ಮಕ್ಕಳು ದುಡಿಯುವಂತಿಲ್ಲ ಎಂದು ಭಾರತ ಸಂವಿಧಾನ ತಿಳಿಸಿದೆ. ತಮ್ಮ ತಮ್ಮ ಮನೆಗಳಲ್ಲಿ ಕೆಲಸಗಳನ್ನು ಮಾಡಬಹುದು. ಆದರೆ ಒತ್ತಾಯದಿಂದ ಮಕ್ಕಳನ್ನು ಕೆಲಸಕ್ಕೆ ತಳ್ಳಬಾರದು. ಇದು ಕಾನೂನಿಗೆ ವಿರುದ್ಧವಾಗಿದೆ. ಹೀಗಿದ್ದೂ, ಇಂದು ರಾಯಚೂರಿನಲ್ಲಿ ಸುಮಾರು 59 ಮಕ್ಕಳನ್ನು ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ತಂಡ ದಾಳಿಯನ್ನು ನಡೆಸಿ ಮಕ್ಕಳನ್ನು ರಕ್ಷಣೆ ಮಾಡಿದೆ.

ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಮಕ್ಕಳನ್ನ ಕೂಲಿ ಕೆಲಸಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿಯನ್ನು ಪಡೆದ ಮಕ್ಕಳ ರಕ್ಷಣಾ ಇಲಾಖೆಯ ಜಿಲ್ಲಾಧಿಕಾರಿ ಮಂಜುನಾಥ್ ಮತ್ತು ಅವರ ತಂಡವು ಬೆಳ್ಳಂಬೆಳಗ್ಗೆ ದಾಳಿಯನ್ನು ನಡೆಸಿದೆ.

ವಾಹನಗಳನ್ನ ಜಪ್ತಿ ಮಾಡಿ ಸಿರವಾರ ಠಾಣೆಯಲ್ಲಿ ಮಕ್ಕಳ ಕಳ್ಳ ಸಾಗಾಣಿಕೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ. ಅಧಿಕಾರಿಗಳು ಮಕ್ಕಳನ್ನು ರಕ್ಷಿಸಿ, ಅವರ ಪೋಷಕರಿಗೆ ಹಸ್ತಾಂತರಿಸಿದರು. ಈ ವೇಳೆ ಮಕ್ಕಳನ್ನ ಕೂಲಿ ಕೆಲಸಕ್ಕೆ ಕಳುಹಿಸದಂತೆ ಪೋಷಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಕ್ಕಳನ್ನ ಕೂಲಿ ಕೆಲಸಕ್ಕೆ ತಳ್ಳುತ್ತಿರುವ ಬಗ್ಗೆ ಸುದ್ದಿ ಮಾಧ್ಯಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಸ್ತೃತ ವರದಿಯು ಪ್ರಸಾರವಾಗಿತ್ತು. ಈ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಜಿಲ್ಲೆಯ ಹಲವೆಡೆ ಕೂಲಿ ಕೆಲಸಕ್ಕೆ ತೆರಳುವ ಮಕ್ಕಳನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

Most Popular

Recent Comments