ಪುತ್ತೂರು: ಪುತ್ತೂರಿನಲ್ಲಿ ಅಪ್ರಾಪ್ತರನ್ನು ಭಿಕ್ಷಾಟನೆಗೆ ಕಳುಹಿಸುವ ಮೂಲಕ ಆ ಪುಟ್ಟ ಮಕ್ಕಳಿಗೆ ಹಿಂಸೆಯನ್ನು ನೀಡುತ್ತಿದ್ದಾರೆಂಬ ದೂರಿನ ಆಧಾರದ ಮೇರೆಗೆ ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಯ ಅಧಿಕಾರಿಗಳು ನೆಲ್ಲಿಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ 6 ವರ್ಷದ ಬಾಲಕ ಮತ್ತು 8 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಸಂಗೀತ ಎಂಬ ಮಹಿಳೆಯು ಇತ್ತೀಚೆಗೆ ಬಿಸಿ ರೋಡ್‌ನಲ್ಲಿ ಮಗುವೊಂದಕ್ಕೆ ಹಲ್ಲೆಯನ್ನು ನಡೆಸುತ್ತಿರುವ ಕುರಿತು ಮಾಹಿತಿಯನ್ನು ಪಡೆದು ಅಲ್ಲಿ ದಾಳಿ ನಡೆಸಿದ್ದ ಚೈಲ್ಡ್ ಲೈನ್ ಅಧಿಕಾರಿಗಳು ಮಗುವನ್ನು ರಕ್ಷಣೆ ಮಾಡಿದ್ದರು.
ಸೆ.13ರಂದು ಪುತ್ತೂರಿನಲ್ಲಿ ಮಹಿಳೆಯೊಬ್ಬರು ಸಣ್ಣ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುತ್ತಿರುವ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಯ ಜಿಲ್ಲಾ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ ಅವರು ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಬಂದಾಗ ಬಿಸಿ ರೋಡ್‌ನಲ್ಲಿದ್ದ ಮಗುವಿಗೆ ಹಲ್ಲೆ ನಡೆಸುತ್ತಿದ್ದ ಮಹಿಳೆ ಸಂಗೀತ ಅವರೇ ಪುತ್ತೂರಿನಲ್ಲಿಯೂ ಅಪ್ರಾಪ್ತ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸಿ ದೌರ್ಜನ್ಯ ನಡೆಸುತ್ತಿರುವುದನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರ ಸಹಕಾರದೊಂದಿಗೆ ರೆಡ್ ಹ್ಯಾಂಡ್ ಹಾಗಿ ಪತ್ತೆ ಮಾಡಿ, ಆಕೆಯಿಂದ 6 ವರ್ಷದ ಬಾಲಕ ಮತ್ತು 8 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿ ಮಂಗಳೂರು ಪುನರ್ವಸತಿ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಅವರು ಉಪಸ್ಥಿತರಿದ್ದರು.