ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ; ಶೃಂಗೇರಿ: ರಿಜಿಸ್ಟ್ರೇಷನ್ ನಂಬರ್ ಇಲ್ಲದ ಕಾರ್ ನಲ್ಲಿ ಬಂದ್ರು.. 3000 ರೂ. ಪೆಟ್ರೋಲ್ ಹಾಕಿಸಿ ಹಣ ಕೊಡದೆ ಪರಾರಿಯಾದ್ರು!
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಆದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ನೀರು ಸುರಿಯುವ ಕೊಠಡಿಗಳಲ್ಲೆ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ದುಸ್ಥಿತಿ ಎದುರಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮಳೆಗಾಲದಲ್ಲಿ ಗೆಳೆಯರ ಜೊತೆ ಟ್ರೆಕ್ಕಿಂಗ್ ಮಾಡಲು ಚಿಕ್ಕಮಗಳೂರಿನ ಬೆಸ್ಟ್ ಜಾಗ ಇಲ್ಲಿದೆ ನೋಡಿ
- ಟ್ವಿಟ್ಟರ್ ಗೆ ಟಕ್ಕರ್ ನೀಡಲು ಬಿಡುಗಡೆ ಮಾಡಿದ ಥ್ರೆಡ್ಸ್ ಆಪ್ ಹೇಗಿದೆ..
- arecanut price: 08 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಈ ಸರಕಾರಿ ಪ್ರೌಢಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರೆ.
ಇದನ್ನೂ ಓದಿ; fact check: ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಎಂದು ವಿಡಿಯೋ ವೈರಲ್
ಪೋಷಕರು ಹಾಗೂ ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರಾ ಎಂಬ ನಿರೀಕ್ಷೆಯಲ್ಲಿದ್ದಾರೆ.
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.
ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಬಸ್ಸಿನ ಮೇಲೆ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕ ಸತೀಶ್ ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದ್ದು, ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಪತಿಯ ಪ್ರಿಯತಮೆಯಿಂದಲೇ ನಡೀತಾ ಪತ್ನಿಯ ಭೀಕರ ಕೂಲೆ?