Friday, April 26, 2024
Homeಇತರೆಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಬ್ರೇಕ್ : ರಾಜ್ಯಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಬ್ರೇಕ್ : ರಾಜ್ಯಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಭೀತಿಯ ಹಿನ್ನೆಲೆ ರಾಜ್ಯದಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರ್ಷಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ಮತ್ತು ಓಮಿಕ್ರಾನ್ ಆತಂಕದ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಮತ್ತು ಕ್ರಿಸ್ ಮಸ್ ಆಚರಣೆಗೆ ನಿರ್ಬಂಧ ಹಾಕಿದ್ದು ಇದರ ಸಂಬಂಧ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹೊಸವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದ್ದು ಆಚರಣೆಯನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು, ರಸ್ತೆಗಳು, ಆಟದ ಮೈದಾನ ಕ್ಕೆ ನಿರ್ಬಂಧ ಹೇರಿದೆ.

ಕ್ರಿಸ್ ಮಸ್ ಆಚರಣೆಗೆ ಮಾರ್ಗಸೂಚಿ ಈ ಕೆಳಗಿನಂತಿದೆ.

ಚರ್ಚ್ ಆವರಣದದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಗಳು/ಸಾಮೂಹಿಕ ಇತ್ಯಾದಿಗಳನ್ನು ಕೋವಿಡ್ ಮಾರ್ಗಸೂಚಿಯ ಅನ್ವಯದಲ್ಲಿ ಪಾಲಿಸುವುದು.

ಆಚರಣೆ ಅಥವಾ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು. ರಸ್ತೆಗಳು ಉದ್ಯಾನವನಗಳನ್ನು ಬಳಸಿಕೊಳ್ಳುವಂತಿಲ್ಲ.

ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳು ಈ ಕೆಳಗಿನಂತಿದೆ.

1) ಕ್ಲಬ್ ಗಳು/ಪಬ್ ಗಳು. ರೆಸ್ಟೋರೆಂಟ್ ಗಳು/ಹೋಟೆಲ್ ಗಳು/ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ / ಅರ್ಕೇಸ್ಟ್ರಾ / ಸಮೂಹ ನೃತ್ಯ ಸೇರಿದಂತೆ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

2) ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸುವುದು ನಿಷಿದ್ದ.

3) ರೆಸ್ಟೋರೆಂಟ್ ಹಾಗೂ ಪಬ್ ಗಳಲ್ಲಿರುವ ಸಿಬ್ಬಂದಿಗಳು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು ಹಾಗೂ ಕೊರೊನಾ ಮಾರ್ಗಸೂಚಿಯ ಪಾಲನೆ ಕಡ್ಡಾಯ

4) ರೆಸ್ಟೋರೆಂಟ್ ಹಾಗೂ ಪಬ್ ಗಳಿಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು.

5) ಸಾಮೂಹಿಕ ನೃತ್ಯ ಹಾಗೂ ಡಿ.ಜೆ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

6) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ.

7) ರೆಸ್ಟೋರೆಂಟ್ ಮತ್ತು ಕ್ಲಬ್ ಗಳಲ್ಲಿ ಶೇ.50 ರಷ್ಟು ಮಾತ್ರ ಜನರು ಸೇರಲು ಅವಕಾಶ

ಇವೆಲ್ಲವೂ ಡಿಸೆಂಬರ್ 30 ರಿಂದ ಜನವರಿ 2 ನೇ ತಾರೀಖಿನ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿಯ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.

Most Popular

Recent Comments