Church Construction: ಕ್ರಿಶ್ಚಿಯನ್ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ

Church Construction: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಆಶ್ರಯ ಯೋಜನೆಯಲ್ಲಿ ಮನೆ ಕಟ್ಟಿಕೊಳ್ಳಲು ನೀಡಿದ ಜಾಗದಲ್ಲಿ, ಮನೆ ನಿರ್ಮಾಣದ ಬದಲು ಅಕ್ರಮವಾಗಿ ಚರ್ಚ್ ನಿರ್ಮಿಸಲು ಮುಂದಾಗಿದ್ದು, ಇದನ್ನು ಕೂಡಲೆ ತಡೆ ಹಿಡಿಯಬೇಕೆಂದು ಒತ್ತಾಯಿಸಿ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಎಸ್ಟೇಟ್ ಬಡಾವಣೆ ಗ್ರಾಮಸ್ಥರು ದೂರು ನೀಡಿದ್ದಾರೆ.

ಇದನ್ನೂ ಓದಿ; ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಇದನ್ನೂ ಓದಿ; ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು

Church Construction: ಒಂದೂ ಕ್ರಿಶ್ಚಿಯನ್ ಕುಟುಂಬದ ಮನೆಯಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಚರ್ಚ್ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ. ಗ್ರಾಮಕ್ಕೆ ಸಂಬಂಧ ಪಡದ ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬ ವ್ಯಕ್ತಿ ಕ್ರಿಶ್ಚಿಯನ್ ಕುಟುಂಬಗಳೇ ಇಲ್ಲದ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ; ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್

ಇದನ್ನೂ ಓದಿ; ಮೂಡಿಗೆರೆ: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶ

ರಂಗ ಕೂಡ ಮತಾಂತರ ಹೊಂದಿದವರಾಗಿದ್ದು ಸರ್ಕಾರದಿಂದ ಮನೆ ಕಟ್ಟಿಸಲು ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಲೋಕವಳ್ಳಿ ಗ್ರಾಮಕ್ಕೆ ಹಳೆ ಮೂಡಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಇನ್ನು ಚರ್ಚ್ ನಿರ್ಮಾಣ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ. ಅಕ್ರಮ ಮತಾಂತರಕ್ಕಾಗಿ ಚರ್ಚ್ ನಿರ್ಮಾಣದ ಆರೋಪ ಮಾಡಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಒಂದು ಕುಟುಂಬವಿಲ್ಲದ ಊರಿನಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
  2. ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
  3. ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್‌ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
  4. ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
  5. ಕಡೂರು: ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
  6. ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
  7. ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್
  8. ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ; ರಾಜ್ಯದಲ್ಲಿ 1714 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇