ಕಡೂರು; (ನ್ಯೂಸ್ ಮಲ್ನಾಡ್ ವರದಿ) ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಶುಕ್ಲಾಪುರದ ಬೋವಿ ಕಾಲೋನಿಯಲ್ಲಿ ನಡೆದಿದೆ.
ಇದನ್ನೂ ಓದಿ; ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು
ನಂಜುಂಡಪ್ಪ ಎಂಬುವರಿಗೆ ಸೇರಿದ ಮನೆ, ಆಕಸ್ಮಿಕ ಬೆಂಕಿ ತಗುಲಿ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಬೀರು, 80 ಸಾವಿರ ಹಣ, ಕಿವಿ ಓಲೆ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳು ನಾಶವಾಗಿದೆ.
ಇದನ್ನೂ ಓದಿ; ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು
ನಂಜುಂಡಪ್ಪ ದಂಪತಿ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದ್ದು, ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪಠ್ಯಪರಿಷ್ಕರಣೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
- ಶೃಂಗೇರಿ ಜನತೆಗೆ ಸಿಹಿಸುದ್ದಿ ಕೊಟ್ರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ ಜಾರ್ಜ್, ಅಧಿಕಾರಿಗಳಿಗೆ ಸೂಚನೆ; ಏನದು ಸಿಹಿಸುದ್ದಿ
- ಡಿ. ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದರ ಕುರಿತು ಭವಿಷ್ಯ ನುಡಿದ ಅವದೂತ ವಿನಯ್ ಗುರೂಜಿ
ಇದನ್ನೂ ಓದಿ; ಚಿಕ್ಕಮಗಳೂರು: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ
ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು
ಆಗುಂಬೆ/ಹೆಬ್ರಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಶಶಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಹಿಂಬದಿ ಕುಳಿತಿದ್ದ ನಿರ್ಮಿತಾಗೆ ಕೂಡ ತೀವ್ರ ತರಹದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನಾ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (22) ಸ್ಥಳದಲ್ಲೇ ಮೃತಪಟ್ಟಿದ್ದ, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.