Wednesday, November 29, 2023
Homeಮಲೆನಾಡುಚಿಕ್ಕಮಗಳೂರುಅಮೆರಿಕದ ಮೋದಿ ಕಾರ್ಯಕ್ರಮದಲ್ಲಿ ಕಾಫಿನಾಡಿನ ಯುವಕ; ಜಗತ್ತಿನ ಗಮನ ಸೆಳೆದ ಕನ್ನಡಿಗ

ಅಮೆರಿಕದ ಮೋದಿ ಕಾರ್ಯಕ್ರಮದಲ್ಲಿ ಕಾಫಿನಾಡಿನ ಯುವಕ; ಜಗತ್ತಿನ ಗಮನ ಸೆಳೆದ ಕನ್ನಡಿಗ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಪ್ರಧಾನಿ ನರೇಂದ್ರ ಮೋದಿ ಅವರ ಅರೈವಲ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಕಾಫಿನಾಡು ಚಿಕ್ಕಮಗಳೂರಿನ ಯುವಕ ಆಹ್ವಾನಿತರಾಗಿದ್ದಾರೆ. ಇಂದು ಅಮೆರಿಕಾದ ವಾಷಿಂಗ್ಟನ್‌ನಲ್ಲಿ ಮೋದಿ ಅರೈವಲ್ ಕಾರ್ಯಕ್ರಮದಲ್ಲಿ 25 ವರ್ಷದ ಅವೈಜ್ ಅಹಮದ್ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ನಿವಾಸಿ ಭಾಗಿಯಾಗುತ್ತಿದ್ದಾರೆ. ಅವೈಜ್ ಅಹಮದ್ ಚಿಕ್ಕಮಗಳೂರಿನ ಆಲ್ದೂರಿನ ಗಲ್ಲಿ ಗಲ್ಲಿಗಳಲ್ಲಿ ಓಡಾಡಿಕೊಂಡಿದ್ದ ಯುವಕ ಅಂದ್ರೆ ನೀವು ನಂಬಲೇಬೇಕು.

ಇದನ್ನೂ ಓದಿ; ತರೀಕೆರೆ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಬಾಲ್ಯದಿಂದಲೂ ವಿಜ್ಞಾನಿ ಆಗಬೇಕೆಂದು ಕನಸು ಕಂಡಿದ್ದರು. ಅಮೆರಿಕಾದ ಸ್ಪೇಸ್ ಎಕ್ಸ್ ಮೂಲಕ ಶಕುಂತಲಾ ಎಂಬ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದಾರೆ. ಈ ಉಪಗ್ರಹ ಶೇಕಡ 50ಕ್ಕಿಂತ ಹೆಚ್ಚು ಡೇಟಾವನ್ನ ಬಿಡುಗಡೆ ಮಾಡುತ್ತೆ. ಭೂಮಿಯ ಚಲನವಲನದ ಪೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತೆ.


ಇತ್ತೀನ ಜನಪ್ರಿಯ ಸುದ್ದಿಗಳು 

ಎಳೆ ವಯಸ್ಸಲ್ಲೇ ಮಗನ ಸಾಧನೆ ಕಂಡು ಅವೇಜ್ ಅಪ್ಪ ನದೀಮ್ ಮಗನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಅವೇಜ್ ತಂದೆ ನದೀಮ್ ಆಲ್ದೂರಿನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದಾರೆ. ನಾವು ಮಗನಿಗೆ ಇದನ್ನೇ ಓದಬೇಕು ಎಂದು ಒತ್ತಡ ಹಾಕಿಲ್ಲ. ಬಾಲ್ಯದಿಂದಲೂ ವಿಜ್ಞಾನಿ ಆಗುವ ಕನಸು ಕಂಡಿದ್ದನು. ಇಂದು ತಾಬಬು ಅಂದುಕೊಂಡಿದ್ದನ್ನು ಸಾಧಿಸಿದ್ದಾನೆ ಎಂದು ಅಬೇಜ್ ತಂದೆ ನದೀಮ್ ಹೇಳುತ್ತಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ಲಾ, ಆವಾಗ ಸಗಣಿ ತುಂಬಿತ್ತಾ?-ಶೋಭಾ ಕರಂದ್ಲಾಜೆ ಆಕ್ರೋಶ

ಮಗನಿಗೆ ಬೈಟ್ ಹೌಸ್‌ನಿಂದ ಆಹ್ವಾನ ಬಂದಿದೆ. ಈ ವಿಷಯ ಕೇಳಿ ನಮಗೆ ತುಂಬಾನೇ ಖುಷಿಯಾಗಿದೆ. ವಿದೇಶದಲ್ಲಿ ನಡೆಯುತ್ತಿರುವ ನಮ್ಮ ದೇಶದ ಪ್ರಧಾನಿಗಳ ಕಾರ್ಯಕ್ರಮದಲ್ಲಿ ಮಗ ಭಾಗಿಯಾಗಿರುವ ಬಗ್ಗೆ ನಮಗೆ ಹೆಮ್ಮೆ ಆಗಿದ ಎಂದು ನದೀಮ್ ಸಂತೋಷ ವ್ಯಕ್ತಪಡಿಸಿದ್ದಾರೆ.

ಮೊದಲು ರಷ್ಯಾದಿಂದ ಉಪಗ್ರಹ ಉಡಾವಣೆಗೆ ಸಿದ್ದತೆ ನಡೆದಿತ್ತಾದ್ರು, ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿ ತನ್ನ ಕನಸಿನ ಯೋಜನೆಯನ್ನ ದೇಶದ ದೊರೆಯ ಮುಂದಿಟ್ಟಿದ್ದ. ಇದೀಗ ಜಗತ್ತಿನ ಗಮನ ಸೆಳೆದಿರುವ ಅವೇಜ್ ಇಂದು ಅಮೇರಿಕಾದ ವಾಷಿಂಗ್‌ನಲ್ಲಿ ಮೋದಿ ಅರೈವಲ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಲಿದ್ದಾನೆ. ಆ ಕ್ಷಣವನ್ನ ಕಣ್ತುಂಬಿಕೊಳ್ಳಲು ಅವರ ತಾಯಿ ತಶ್ವಿನ್ ರಲ್ಲೂ ಕುತೂಹಲದ ಜೊತೆಗೆ ಸಂತಸವೂ ಮನೆ ಮಾಡಿದೆ.

ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ವಾರದ ಏಳು ದಿನವೂ ಸಿಗಲಿದೆ ವೆರೈಟಿ ಊಟ, ತಿಂಡಿ

ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಮರು ಜೀವ ಸಿಕ್ಕಂತಾಗಿದೆ. ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಕಾಂಗ್ರೆಸ್ ಸರ್ಕಾರ ಮರುಜೀವ ನೀಡಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಕಾರ್ಮಿಕ ಮಹಿಳೆಯ ಹತ್ಯೆ ಮಾಡಿ ಸುಟ್ಟುಹಾಕಿದ ಹಂತಕರು, ಸ್ಥಳಕ್ಕೆ sp ಉಮಾ ಪ್ರಶಾಂತ್ ಭೇಟಿ

2017 ರಲ್ಲಿ ಸಿದ್ದರಾಮಯ್ಯ ಸರ್ಕಾರ ಮೊದಲ ಬಾರಿಗೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್ ಗಳು ಹಳ್ಳ ಹಿಡಿದಿದ್ದವು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಗಳಿಗೆ ಮರು ಜೀವ ನೀಡಲಾಗುತ್ತಿದೆ. ಅದರಂತೆ ಈಗ ಹೊಸ ಮೆನೂ ಕೂಡ ಸಿದ್ದವಾಗಿದೆ.

ಇದನ್ನೂ ಓದಿ; ಕಡೂರು; ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಟ್ರಯಲ್ ರನ್ ಯಶಸ್ವಿ

ಹೌದು ಈ ಹಿಂದೆ ಇಂದಿರಾ ಕ್ಯಾಂಟೀನ್ ಅಲ್ಲಿ ನೀಡುತ್ತಿದ್ದ ಫುಡ್ ನಲ್ಲಿ ಕ್ವಾಲಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇತ್ತೀಚಿಗೆ ಕ್ಯಾಂಟೀನ್ ಗೆ ಬರುತ್ತಿರುವ ಊಟದಲ್ಲಿ ರುಚಿ ಇಲ್ಲ. ಕ್ವಾಲಿಟಿಯು ಇರೋದಿಲ್ಲ ಎಂದಿದ್ದರು. ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ.

ಹಾಗಾದರೆ ಹೊಸ ಮೆನುವಿನಲ್ಲಿ ಏನೆಲ್ಲಾ ಸೇರ್ಪಡೆಯಾಗಿದೆ?:
ಇಂದಿರಾ ಕ್ಯಾಂಟೀನ್ ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ. ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿಗಳು ಇಂದಿರಾ ಕ್ಯಾಂಟೀನ್ ನಲ್ಲಿ ಇನ್ಮುಂದೆ ಸಿಗಲಿದೆ.

ಯಾವ ವಾರ ಏನೇನು ಮೆನು?:
ಭಾನುವಾರ:
ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್-ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿ ಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಸೋಮವಾರ:
ಬೆಳಗ್ಗೆ: ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್-ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ: ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ:
ಬೆಳಗ್ಗೆ: ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ: ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ

ಬುಧವಾರ :
ಬೆಳಗ್ಗೆ: ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು
ರಾತ್ರಿ: ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ:
ಬೆಳಗ್ಗೆ: ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್-ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ: ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ

ಶುಕ್ರವಾರ :
ಬೆಳಗ್ಗೆ: ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ: ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಶನಿವಾರ:
ಬೆಳಗ್ಗೆ: ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ದರ ಎಷ್ಟು?;
ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗಿನ ಉಪಹಾರಕ್ಕೆ 5 ರೂ. ಹಾಗೂ ಮಧ್ಯಾಹ್ನ, ರಾತ್ರಿಯ ಊಟಕ್ಕೆ 10 ರೂ. ಅನ್ನು ನಿಗದಿಪಡಿಸಲಾಗಿದೆ.

Most Popular

Recent Comments