Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಮಾರ್ಗಮಧ್ಯೆ ಆ್ಯಂಬುಲೆನ್ಸ್ ನಲ್ಲೇ ಹೆರಿಗೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ

ಚಿಕ್ಕಮಗಳೂರು: ಮಾರ್ಗಮಧ್ಯೆ ಆ್ಯಂಬುಲೆನ್ಸ್ ನಲ್ಲೇ ಹೆರಿಗೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂಬುಲೆನ್ಸ್ ನಲ್ಲಿ ಕರೆತರುತ್ತಿದ್ದಾಗ ಮಾರ್ಗಮಧ್ಯದಲ್ಲಿಯೇ ಹೆರಿಗೆ ಮಾಡಿಸಿದ ಅಪರೂಪದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ನಾಗರವಳ್ಳಿ ಸಮೀಪ ನಡೆದಿದೆ.

ಇದನ್ನೂ ಓದಿ; ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು

ಇದನ್ನೂ ಓದಿ; ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು

ಜೂನ್ 19ರ ಬೆಳಿಗ್ಗೆ ಸುಮಾರು 7:17 ಕ್ಕೆ ಬಸವನ ಕೋಡಿಯ 22 ವರ್ಷದ ಗಾಯಿತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದಾರೆ ಎಂದು ಚಿಕ್ಕಮಗಳೂರಿನ 108 ಆಂಬುಲೆನ್ಸ್ ಗೆ ಕರೆ ಬಂದಿದೆ. ಕೂಡಲೇ 108 ಅಂಬುಲೆನ್ಸ್ ಚಾಲಕ ಸ್ಥಳಕ್ಕೆ ಭೇಟಿ ನೀಡಿ ಗಾಯಿತ್ರಿ ಅವರನ್ನು ಬಸವನ ಕೋಡಿಯಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆತರುತ್ತಿರುವಾಗ ದಾರಿ ಮಧ್ಯೆ ನಾಗರಹಳ್ಳಿ ಹತ್ತಿರ ಗಾಯಿತ್ರಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. 108 ಆಂಬುಲೆನ್ಸ್ ನಲ್ಲಿದ್ದ ಶುಶ್ರೂಷಕಿ ದೊಡ್ಡಮ್ಮ ಹೆರಿಗೆ ಮಾಡಿಸಿದ್ದಾರೆ ಜೊತೆಯಲ್ಲಿದ್ದ ಸಿಬ್ಬಂದಿ ವಸಂತ್ ಕೂಡ ಸಹಾಯ ಮಾಡಿದ್ದಾರೆ. ಬಳಿಕ ತಾಯಿ ಹಾಗೂ ಮಗುವನ್ನು ಸುರಕ್ಷಿತವಾಗಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

108 ಸಿಬ್ಬಂದಿಯ ಸೇವೆಯ ಹಾಗೂ ಸಮಯಪ್ರಜ್ಞೆ ಕುರಿತಂತೆ ಸಂಬಂಧಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ

ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು

ಆಗುಂಬೆ/ಹೆಬ್ರಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಶಶಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಹಿಂಬದಿ ಕುಳಿತಿದ್ದ ನಿರ್ಮಿತಾಗೆ ಕೂಡ ತೀವ್ರ ತರಹದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನಾ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (22) ಸ್ಥಳದಲ್ಲೇ ಮೃತಪಟ್ಟಿದ್ದ, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Most Popular

Recent Comments