Monday, December 11, 2023
Homeಮಲೆನಾಡುಚಿಕ್ಕಮಗಳೂರುಶೃಂಗೇರಿ; ಹಲವೆಡೆ ವಿದ್ಯುತ್ ವ್ಯತ್ಯಯ

ಶೃಂಗೇರಿ; ಹಲವೆಡೆ ವಿದ್ಯುತ್ ವ್ಯತ್ಯಯ

ಶೃಂಗೇರಿ; (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ಶುಕ್ರವಾರ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ಠಾಣೆಗೆ ಹೈಟೆಕ್ ರೂಪ ಕೊಟ್ಟ ಪಿ.ಎಸ್.ಐ ಪವನ್

ಇದನ್ನೂ ಓದಿ; ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ

16.06.2023 ರಂದು (ಶುಕ್ರವಾರ) ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಉನ್ನತೀಕರಣ ಹಾಗೂ ಟವರ್ ನಿರ್ಮಾಣ ಕಾಮಗಾರಿ ಮತ್ತು 2023ನೇ ಸಾಲಿನ ಮಾನ್ಸೂನ್ ಪೂರ್ವ 33 ಹಾಗೂ 11 ಕೆ.ವಿ. ವಿದ್ಯುತ್ ಮಾರ್ಗಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶೃಂಗೇರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಶೃಂಗೇರಿಗೆ ಬೇಟಿ ನೀಡಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನವನ್ನು ಪಡೆದರು.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಜನಾರ್ದನ ರೆಡ್ಡಿಯ ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನದ ಅಂಗವಾಗಿ ಅಕ್ಷರಾಭ್ಯಾಸ ಮಾಡಿಸಿ, ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಶೃಂಗೇರಿಯ ನರಸಿಂಹವನದಲ್ಲಿ ಸನ್ನಿಧಾನ ಶ್ರೀ ಶ್ರೀ ಜಗದ್ಗುರು ವಿಧುಶೇಖರ ಭಾರತಿಗಳ ದರ್ಶನ ಪಡೆದು, ಹಲವಾರು ವಿಚಾರಗಳನ್ನು ಚರ್ಚಿಸಿ ಆಶೀರ್ವಾದ ಪಡೆದಿದ್ದು ನನ್ನ ಪೂರ್ವಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ. ಶೃಂಗೇರಿ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಗೌರಿ ಶಂಕರ್ ಅವರನ್ನು ಈ ಸಂದರ್ಭದಲ್ಲಿ ನೆನೆಯುತ್ತಿದ್ದೇನೆ. ಶೃಂಗೇರಿ ಮಠದ ಬಳ್ಳಾರಿ ಶಾಖೆಯ ಮಠಾಧಿಕಾರಿ ಶ್ರೀ ಬಿ.ಕೆ.ಬಿ.ಎನ್.ಮೂರ್ತಿ ಹಾಗೂ ಶ್ರೀ ಮೋಹನ್ ಶಾಸ್ತ್ರಿ ಅವರ ಸಹಕಾರಕ್ಕಾಗಿ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.
ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದ ಕೋರ್ಟ್:

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ 2023 ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

Most Popular

Recent Comments