ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಒಟ್ಟು 11 ಮಂದಿ ಬಂಧನಕ್ಕೊಳಗಾಗಿದ್ದಾರೆ.
ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ
ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?
ಮೇ 6 ರಂದು ಸುಮಾರು 15 ಮಂದಿ ಇದ್ದ ತಂಡ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಿರಗನಹಳ್ಳಿಯಲ್ಲಿರುವ ಮಾಜಿ ಶಾಸಕ ನಾಗರಾಜ್ ಅವರ ತೋಟದ ಮನೆಯಲ್ಲಿ ದರೋಡೆ ನಡೆಸಿದ್ದು, ಈ ವೇಳೆ ನಾಗರಾಜ್ ಅವರ ಮೇಲೆ ಹಲ್ಲೆ ಮಾಡಿ 963 ಗ್ರಾಂ ಚಿನ್ನ ಹಾಗೂ 61,000 ನಗದು ದೋಚಿ ಪರಾರಿಯಾಗಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೈಟ್ ವಿಚಾರಕ್ಕೆ ಗಲಾಟೆ; ಮಹಿಳೆಗೆ ಚಾಕುವಿನಿಂದ ಹಲ್ಲೆ
- ಉಡುಪಿಯಿಂದ ಮಹಿಳೆ ನಾಪತ್ತೆ: ದೂರು ದಾಖಲು
- ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ
ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಇದ್ದ ಕಾರಣ ಮಾಜಿ ಶಾಸಕರ ಮನೆಯಲ್ಲಿ ಕೋಟೆಗಟ್ಟಲೆ ಹಣ ಇರಬಹುದು ಎಂಬ ಕಾರಣಕ್ಕೆ ಈ ದರೋಡೆ ಮಾಡಲಾಗಿತ್ತು ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಿ ಅವರ ಬಳಿ ಇದ್ದ 27 ಗ್ರಾಂ ತೂಕದ ಎರಡು ಚಿನ್ನದ ಬಳೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೇಂದ್ರ ಕಾರನ್ನು ವಶಕ್ಕೆ ಪಡೆಯಲಾಗಿದೆ.
ನಿತೀನ್ ಎಸ್ ಮೂರ್ತಿ ಅಲಿಯಾಸ್ ನಿತೀನ್ ಶೆಟ್ಟಿ (28) ವೆಂಕಟೇಶ ಅಲಿಯಾಸ್ ವೆಂಕಿ (23), ಕಾರ್ತಿಕ್ ಎಂ.ಎಸ್ (25), ಮಹೇಶ ಎಂ (21) ಬಂಧಿತ ಆರೋಪಿಗಳು.
ಇದನ್ನೂ ಓದಿ; ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.
ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.
ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.