Sunday, December 3, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುವ ಮೂಲಕ ಜನರಿಗೆ ಅನ್ಯಾಯ; ಜೆಡಿಎಸ್ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ...

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುವ ಮೂಲಕ ಜನರಿಗೆ ಅನ್ಯಾಯ; ಜೆಡಿಎಸ್ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಹೇಳಿಕೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಕೊಟ್ಟ ಮತದಾರರಿಗೆ ಗ್ಯಾರಂಟಿ ಭರವಸೆಯನ್ನ ಪಕ್ಷ ಅಸ್ಥಿತ್ವಕ್ಕೆ ಬಂದ ನಂತರ ಅನುಷ್ಟಾನಕ್ಕೆ ತರಲು ನಿರ್ಬಂಧ ಹೇರುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಹೇಳಿದರು.

ಇದನ್ನೂ ಓದಿ; ಚಿಕ್ಕಮಗಳೂರು: ಬಿಜೆಪಿ ಮುಖಂಡ ಅನ್ವರ್ ಹತ್ಯೆ ಪ್ರಕರಣ

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದು ತಿಂಗಳು ಕಳೆಯುತ್ತ ಬಂದರೂ ಯೋಜನೆ ಜಾರಿಗೆ ಸಬೂಬು ಹೇಳುತ್ತ ಕಾಲ ಕಳೆಯುತ್ತಿದೆ. ಚುನಾವಣೆಗೂ ಮುನ್ನ ಎಲ್ಲರಿಗೂ ಸವಲತ್ತು ನೀಡುವುದಾಗಿ ಹೇಳಿದ್ದರು. ಅದರೆ ಇದೀಗ ಯೋಜನೆಗಳಿಗೆ ಷರತ್ತುಗಳನ್ನು ವಿಧಿಸುತ್ತ ಜನರನ್ನು ವಂಚಿಸುತ್ತಿದೆ ಭರವಸೆಯನ್ನು ಜಾರಿಮಾಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ -23.06.2023

ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವುದಾಗಿ ತಿಳಿಸಿ ಆದಾಯ ತೆರಿಗೆ, ಜಿಎಸ್‌ಟಿ ಪಾವತಿಸುವವರ ಪತ್ನಿಗೆ ಹಣ ನೀಡಲ್ಲ ಎನ್ನುತ್ತಿದ್ದಾರೆ. ಆದರೆ ತೆರಿಗೆದಾರರೂ ಕೂಡ ದೇಶ, ರಾಜ್ಯದ ಬೊಕ್ಕಸಕ್ಕೆ ಹಣ ನೀಡುವವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಮನೆಯ ಯಜಮಾನಿಗೂ 2 ಸಾವಿರ ರೂ. ನೀಡಬೇಕು ಎಂದು ಆಗ್ರಹಿಸಿದರು.


ಇತ್ತೀನ ಜನಪ್ರಿಯ ಸುದ್ದಿಗಳು  

ಚಿಕ್ಕಮಗಳೂರು: ಬಿಜೆಪಿ ಮುಖಂಡ ಅನ್ವರ್ ಹತ್ಯೆ ಪ್ರಕರಣ; ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 5 ವರ್ಷದ ಹಿಂದೆ ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಆರೋಪಿಗಳು ಪತ್ತೆಯಾಗದೆ ಹಿನ್ನಲೆಯಲ್ಲಿ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ಬಾಳೆಹೊನ್ನೂರು: ಫೇಸ್ಬುಕ್ ನಲ್ಲಿ ಸಿಎಂ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಆರೋಪ; ಕೇಸ್ ದಾಖಲು

ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಿ.ಟಿ ರವಿ ಆಪ್ತನಾಗಿದ್ದ ಅನ್ವರ್ ನನ್ನು ನಗರದ ಗೌರಿ ಕಾಲುವೆ ಬಳಿ ಚಾಕುವಿನಿಂದ 13 ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ನಂತರ ಬಿಜೆಪಿ ಸರ್ಕಾರ ಇದ್ದಾಗಲೂ ಸರಿಯಾದ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ತೀರ್ಥಹಳ್ಳಿ: ವಿಧ್ಯಾರ್ಥಿನಿಯ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ; ಪ್ರತಿಭಟನೆ

ಅನ್ವರ್ ಹತ್ಯೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಐಡಿಗೆ ಒಪ್ಪಿಸಿದ್ದರು. 5 ವರ್ಷವಾದರೂ ಹಂತಕರನ್ನು ಬಂಧಿಸಿಲ್ಲ. ಹಾಗಾಗಿ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.

Most Popular

Recent Comments