Sunday, October 1, 2023
Homeಮಲೆನಾಡುಚಿಕ್ಕಮಗಳೂರುಜಯಪುರ: ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ

ಜಯಪುರ: ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ವಿಧಾನ ಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೊಪ್ಪ ತಾಲೂಕು ಮೇಗುಂದಾ ಹೋಬಳಿಯ ಸಂಘ ಪರಿವಾರದ ಕಾರ್ಯಕರ್ತರು ಸೇರಿದಂತೆ ಹಲವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಇದನ್ನೂ ಓದಿ;  ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು

ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ

ಈ ಭಾಗದಲ್ಲಿ ಹಲವು ವರ್ಷಗಳಿಂದ ಆರ್ ಎಸ್ ಎಸ್ ನ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಜಯಪುರದ ಹರೀಶ್ ಮಂಗಳವಾರ ಕಾಂಗ್ರೇಸ್ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದು, ಆರ್ ಎಸ್ ಎಸ್ ಕಾರ್ಯಕರ್ತ ಹರೀಶ್ ಜೊತೆ ಹೋಬಳಿಯ ವಿವಿದ ಭಾಗಗಳ ನಲವತೈದಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ಪರಿವಾರದ ಸಂಘಟನೆಗಳ ಕಾರ್ಯಕರ್ತರ ಜೊತೆಗಿನ ಬಿಜೆಪಿ ನಾಯಕರ ತಿಕ್ಕಾಟವೇ ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಕಳೆದ ಸೋಮವಾರವಷ್ಟೆ ಪತ್ರಿಕಾ ಘೋಷ್ಠಿ ನಡೆಸಿದ್ದ ಆರ್ ಎಸ್ ಎಸ್ ನ ಕಿಬ್ಳಿ ಪ್ರಸನ್ನ ಕುಮಾರ್, ಬಿಜೆಪಿಯ ಕೆಲ ಮುಖಂಡರನ್ನು ಆಣೆ ಪ್ರಮಾಣಕ್ಕೆ ದೇವಸ್ಥಾನಕ್ಕೆ ಕರೆದಿದ್ದೂ, ಅದಕ್ಕೆ ಇಂಬು ನೀಡುವಂತೆ ಕಾರ್ಯಕರ್ತರ ದೊಡ್ಡ ಗುಂಪೊಂದು ಈಗ ದಿಢೀರ್ ಕಾಂಗ್ರೇಸ್ ಸೇರಿರುವುದು ಇನ್ನಷ್ಟು ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕರ್ತರು ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಸಧ್ಯ ಹೋಬಳಿಯಲ್ಲಿನ 6 ಗ್ರಾಮ ಪಂಚಾಯಿತಿಗಳಲ್ಲಿ ಅತ್ತಿಕುಡಿಗೆ ಮತ್ತು ಜಯಪುರ ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಉಳಿದಂತೆ ಅಗಳಗಂಡಿ, ಗುಡ್ಡೇತೋಟ, ಹೇರೂರು ಹಾಗೂ ಹಿರೇಗದ್ದೆ ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೇಸ್ ಬೆಂಬಲಿತರು ಆಡಳಿತ ನಡೆಸುತ್ತಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸಹ ಕಾಂಗ್ರೇಸ್ ಅಭ್ಯರ್ಥಿ ರಾಜೇಗೌಡ ಬಿಜೆಪಿಯ ಜೀವರಾಜ್ ಗಿಂತ ಸುಮಾರು 1200 ಕ್ಕೂ ಹೆಚ್ಚು ಮತಗಳನ್ನು ಹೋಬಳಿಯಲ್ಲಿ ಪಡೆದಿದ್ದ ಮಾಹಿತಿಯಿದ್ದು ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಕಾರ್ಯಕರ್ತರ ನಡುವಿನ ಮುನಿಸು ಹೀಗೆಯೇ ಮುಂದುವರೆದರೆ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಇದು ಇನ್ನಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ.

ಪಕ್ಷೇತರ ಅಭ್ಯರ್ಥಿಯಾಗಿ ಹಿಂದು ಸಂಘನೆಯ ಕಾರ್ಯಕರ್ತ ಕಣಕ್ಕೆ

ಇನ್ನು ಇತ್ತೀಚಿಗಷ್ಟೇ ಮಲ್ನಾಡ್ ಕೇಸರಿ ಸೇನೆಯ ಪುನೀತ್ ಪುಜಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರವೀಣ್ ಖಾಂಡ್ಯ ಹಾಗೂ ಬಿಜೆಪಿ ಅಭ್ಯರ್ಥಿ ಜೀವರಾಜ್ ಮಾಧ್ಯೆ ಇದ್ದ ಅಂತರ ಕಲ್ಲಡ್ಕ ಪ್ರಭಾಕರ್ ಭಟ್ ಸಮ್ಮುಖದಲ್ಲಿ ಬಗೆಹರಿದಿತ್ತು. ಆದರೆ ಈಗ ಬಿಜೆಪಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಇದನ್ನೂ ಓದಿ; ಕಾರು ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Most Popular

Recent Comments