Sunday, December 3, 2023
Homeಮಲೆನಾಡುಚಿಕ್ಕಮಗಳೂರುಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ |...

ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ | ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಗಾಲಿ ಜನಾರ್ದನ್ ರೆಡ್ಡಿ ಭೇಟಿ, ಏನಂದ್ರು?

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಶೃಂಗೇರಿಗೆ ಬೇಟಿ ನೀಡಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನವನ್ನು ಪಡೆದರು.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಇದನ್ನೂ ಓದಿ; ಕೇಂದ್ರದ ಯೋಜನೆ ಜೊತೆಗೆ ಹೆಜ್ಜೆ ಹಾಕಿ; ಶೋಭಾ ಕರಂದ್ಲಾಜೆ

ಜನಾರ್ದನ ರೆಡ್ಡಿಯ ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನದ ಅಂಗವಾಗಿ ಅಕ್ಷರಾಭ್ಯಾಸ ಮಾಡಿಸಿ, ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಶೃಂಗೇರಿಯ ನರಸಿಂಹವನದಲ್ಲಿ ಸನ್ನಿಧಾನ ಶ್ರೀ ಶ್ರೀ ಜಗದ್ಗುರು ವಿಧುಶೇಖರ ಭಾರತಿಗಳ ದರ್ಶನ ಪಡೆದು, ಹಲವಾರು ವಿಚಾರಗಳನ್ನು ಚರ್ಚಿಸಿ ಆಶೀರ್ವಾದ ಪಡೆದಿದ್ದು ನನ್ನ ಪೂರ್ವಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ. ಶೃಂಗೇರಿ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಗೌರಿ ಶಂಕರ್ ಅವರನ್ನು ಈ ಸಂದರ್ಭದಲ್ಲಿ ನೆನೆಯುತ್ತಿದ್ದೇನೆ. ಶೃಂಗೇರಿ ಮಠದ ಬಳ್ಳಾರಿ ಶಾಖೆಯ ಮಠಾಧಿಕಾರಿ ಶ್ರೀ ಬಿ.ಕೆ.ಬಿ.ಎನ್.ಮೂರ್ತಿ ಹಾಗೂ ಶ್ರೀ ಮೋಹನ್ ಶಾಸ್ತ್ರಿ ಅವರ ಸಹಕಾರಕ್ಕಾಗಿ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಶಕ್ತಿ ಯೋಜನೆಯ ಬಗ್ಗೆ ಅಧಿಕಾರಿಗಳು ಹೇಳೋದೇನು?


ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದ ಕೋರ್ಟ್:
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಸಿಡಿಲು ಬಡಿದು ಓರ್ವ ಯುವಕ ಸಾವು, ನಾಲ್ವರಿಗೆ ಸಣ್ಣಪುಟ್ಟ ಗಾಯ

ಈ ಹಿಂದೆ ಕೂಡ 2023 ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ಲೋಕಾರ್ಪಣೆಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ವಿಮಾನದಲ್ಲಿ ಹಾರಾಟ ನಡೆಸಬೇಕು ಎಂಬ ಮಲೆನಾಡಿನ ಜನರ ಕನಸು ನನಸಾಗಲಿದೆ.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಆದರೆ ಇಲ್ಲಿಯ ತನಕ ಪ್ರಯಾಣಿಕ ವಿಮಾನಗಳ ಸಂಚಾರ ಆರಂಭವಾಗಿರಲಿಲ್ಲ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಡೆಯಲಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಇಂಡಿಗೋ ಸಂಸ್ಥೆಯ ವಿಮಾನ ಹಾರಾಟ ಆರಂಭಿಸಲಿದೆ. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಸಹ ಆರಂಭವಾಗಲಿದೆ.

ಇದನ್ನೂ ಓದಿ; ಕೇಂದ್ರದ ಯೋಜನೆ ಜೊತೆಗೆ ಹೆಜ್ಜೆ ಹಾಕಿ; ಶೋಭಾ ಕರಂದ್ಲಾಜೆ

ಇನ್ನು ಈ ಬಗ್ಗೆ ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಮುಖ್ಯಸ್ತ ಮನೋಜ್ ಪ್ರಭು ವಿಮಾನ ಹಾರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ. “ಆಗಸ್ಟ್ 11ರಂದು ಶಿವಮೊಗ್ಗದ ಸೊಗಾನ ವಿಮಾನ ನಿಲ್ದಾಣದಿಂದ ಸಂಸ್ಥೆಯ ಮೊದಲ ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ” ಎಂದು ಹೇಳಿದ್ದಾರೆ.

ವಿಮಾನ ಪ್ರತಿದಿನ ಬೆಳಗ್ಗೆ 9ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗಕ್ಕೆ 10.30ಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಡುವ ವಿಮಾನ 1.30ಕ್ಕೆ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ; ಸಿಡಿಲು ಬಡಿದು ಓರ್ವ ಯುವಕ ಸಾವು, ನಾಲ್ವರಿಗೆ ಸಣ್ಣಪುಟ್ಟ ಗಾಯ

ಸದ್ಯ ಇಂಡಿಗೋ ಸಂಸ್ಥೆ ಬೆಂಗಳೂರು-ಶಿವಮೊಗ್ಗ ನಡುವೆ ಒಂದು ವಿಮಾನವನ್ನು ಮಾತ್ರ ಓಡಿಸಲಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಬೆಂಗಳೂರು-ಶಿವಮೊಗ್ಗ ಮಾರ್ಗಕ್ಕೆ 2,500 ರಿಂದ 3,500 ರೂ. ತನಕ ದರ ಆಗುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಇಂಡಿಗೋ ವೆಬ್‌ಸೈಟ್ ಮೂಲಕ ಟಿಕೆಟ್ ಬುಕ್ ಕೂಡ ಮಾಡಬಹುದಾಗಿದೆ.

Most Popular

Recent Comments