Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಕಾರ್ಮಿಕ ಮಹಿಳೆಯ ಹತ್ಯೆ ಮಾಡಿ ಸುಟ್ಟುಹಾಕಿದ ಹಂತಕರು

ಚಿಕ್ಕಮಗಳೂರು: ಕಾರ್ಮಿಕ ಮಹಿಳೆಯ ಹತ್ಯೆ ಮಾಡಿ ಸುಟ್ಟುಹಾಕಿದ ಹಂತಕರು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೂಲಿ ಕಾರ್ಮಿಕ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಸುಟ್ಟುಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಜಯಮ್ಮ (55) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ; ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು

ಇದನ್ನೂ ಓದಿ; ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು

ಸಿದ್ದಾಪುರ ಗ್ರಾಮದಲ್ಲಿ ಮಹಿಳೆಯನ್ನು ಹತ್ಯೆ ಮಾಡಿ ಸ್ಥಳದಿಂದ 2 ಕಿಮೀ ದೂರದಲ್ಲಿರುವ ಸುಪ್ರೀಮ್ ಎಸ್ಟೇಟ್​​ನಲ್ಲಿ ಹಂತಕರು ಸುಟ್ಟುಹಾಕಿದ್ದರು. ಹತ್ಯೆ ನಡೆದು 7 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸಂಬಂಧ ಎಸ್ಟೇಟ್ ನ ಕೆಲವರನ್ನು ಕರೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಚಾರ್ಮಾಡಿಯಲ್ಲಿ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ; ಮೂವರು ಪೊಲೀಸ್ ವಶಕ್ಕೆ

ಹತ್ಯೆಯ ಸುತ್ತ ಅನುಮಾನದ ಹುತ್ತ

ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಸ್ಟೇಟ್ ಕಾರ್ಮಿಕ ನಾಗರಾಜ್ ನಾಯ್ಕ್ ಎನ್ನುವವನನ್ನು ಬಂಧಿಸಿದ್ದಾರೆ. ಆತ ಕ್ಷುಲ್ಲಕ ಕಾರಣಕ್ಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆದರೆ ಎಳು ದಿನದ ಹಿಂದೆ ನಡೆದ ಎಸ್ಟೇಟ್ ನ ಕಾರ್ಮಿಕ ಮಹಿಳೆಯ ಕೊಲೆ ನಡೆದಿದ್ದರೂ ಮಾಲೀಕರು ಸೇರಿದಂತೆ ಯಾರಿಂದಲೇ ದೂರು ಬಂದಿರಲಿಲ್ಲ. ಹಾಗಾದರೆ ಎಸ್ಟೇಟ್ ಮಾಲೀಕರಿಗೆ 7 ದಿನದಿಂದ ವಿಚಾರವೇ ತಿಳಿದಿರಲಿಲ್ಲವಾ? ಹಾಗಾದರೆ ನಿಜವಾದ ಆರೋಪಿ ಯಾರು? ಎಂಬ ಅನುಮಾನಗಳು ಹುಟ್ಟಿಕೊಂಡಿವೆ‌. ಅಲ್ಲದೇ ಸಂಪೂರ್ಣ ಸುಟ್ಟು ಕರಕಲಾಗಿರುವ ದೇಹವನ್ನು ಯಾವ ಆಯುಧ ಬಳಸಿ ಕೊಲ್ಲಲಾಗಿದೆ ಎಂಬ ಮಾಹಿತಿ ತನಿಖೆಯಿಂದಷ್ಟೇ ಹೊರಬರಬೇಕಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಏಳು ದಿನದ ಹಿಂದೆ ನಡೆದ ಕೊಲೆ ಬೆಳಕಿಗೆ ಬಂದಿದ್ದು ಹೇಗೆ ಗೊತ್ತಾ?

ಏಳು ದಿನದ ಹಿಂದೆ ನೆಟ್ವರ್ಕ್ ಕೂಡ ಸಿಗದ ಆ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿ ಸುಟ್ಟು ಹಾಕಲಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಅದೊಂದು ಫೋನ್ ಕಾಲ್ ನಿಂದ. ನಿನ್ನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರಿಗೆ ಫೋನ್ ಕಾಲ್ ಮಾಡಿದ ಆ ವ್ಯಕ್ತಿ ಸುಳಿವು ನೀಡಿದ್ದ. ಬಳಿಕ ಎಸ್ಪಿ ಉಮಾ ಪ್ರಶಾಂತ್ ಕೂಡ ಭೇಟಿ ನೀಡಿದ್ದರು. ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಸತ್ಯ ಏನೆಂಬುದು ಹೊರಬರಬೇಕಿದೆ.

ಇದನ್ನೂ ಓದಿ; ಶೃಂಗೇರಿಯಲ್ಲೊಂದು ಹೃದಯವಿದ್ರಾವಕ ಘಟನೆ

ಇದನ್ನೂ ಓದಿ; ಚಿಕ್ಕಮಗಳೂರು: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ

ಆಗುಂಬೆ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಸಹಸವಾರೆಯೂ ಸಾವು

ಆಗುಂಬೆ/ಹೆಬ್ರಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಶಶಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ಹಿಂಬದಿ ಕುಳಿತಿದ್ದ ನಿರ್ಮಿತಾಗೆ ಕೂಡ ತೀವ್ರ ತರಹದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನಾ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (22) ಸ್ಥಳದಲ್ಲೇ ಮೃತಪಟ್ಟಿದ್ದ, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Most Popular

Recent Comments