ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಅರಸಿಕೆರೆ ತಾಲೂಕಿನ ಮಲ್ಲಾಪುರದ ಗ್ರಾಮದಲ್ಲಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಶುರುವಾಗಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ.
ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ!
ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜಕೀಯ ನಾಯಕರು ಎಗ್ಗಿಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಈ ನಡುವೆ ಗೊಂದಲ, ಗದ್ದಲ, ವಾಗ್ದಾದ, ಗಲಾಟೆ ಸಂಘರ್ಷ ನಡೆಯುವುದು ಸಾಮಾನ್ಯವಾಗಿದೆ.
ಇದರಂತೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಮಲ್ಲಾಪುರ ಗ್ರಾಮದಲ್ಲಿ ಪ್ರಚಾರದ ವಿಚಾರಕ್ಕೆ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ವಾಗ್ದಾದ ತೀವ್ರಗೊಂಡಿತು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ವಿವಿಧ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ವಶಕ್ಕೆ
- ಉಡಾ ಶಿಕಾರಿ; ಆರೋಪಿ ಬಂಧನ
- ಅಕ್ರಮವಾಗಿ ದಾಸ್ತಾನು ಮಾಡಿದ್ದ 5.5 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ
ಈ ಘಟನಾ ಸ್ಥಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡರು ಇದ್ದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ಮೂಲಕ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ್ದ ಪ್ಲೈಯಿಂಗ್ ಸ್ವಾಡ್ ಅಧಿಕಾರಿಗಳಿಗೂ ಬಂದು ರಾತ್ರಿ 10 ಗಂಟೆಯ ಚುನಾವಣಾ ಪ್ರಚಾರಕ್ಕೆ ಅವಕಾಶ ಕೊಟ್ಟಿದ್ದೀರಾ ಎಂದು ಜೆಡಿಎಸ್ ಕಾರ್ಯಕರ್ತರು ತರಾಟಗೆ ತೆಗೆದುಕೊಂಡರು. ಈ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೈ ಕೈ ವಿಲಾಯಿಸಿಕೊಂಡಿದ್ದಾರೆಂದು ತಿಳಿಯಲಾಗಿದೆ.
ಕಾಂಗ್ರೆಸ್ಸಿಗರು ವೋಟ್ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ
ಚಿಕ್ಕಮಗಳೂರು: ಮಲೆನಾಡಿನ ಮನೆಯೊಂದರ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಯ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರು ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳದ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸ್ಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿಯನ್ನು ಬಿಡಲಾಗುವುದು”ಎಂಬ ಎಚ್ಚರಿಕೆ ಬೋರ್ಡ್ ಹಾಕಿದ್ದಾರೆ.