Clinics: ರಾಜ್ಯದ ಕ್ಲಿನಿಕ್‌ ಗಳಿಗೆ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ

(Clinics) ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್‌ ಗಳ ವಿರುದ್ಧ ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ವಿಧಾನ ಪರಿಷತ್ತಿನ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕ್ಲಿನಿಕ್‌ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿದೆ ಎಂದರು.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?


ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ. ಅಧಿನಿಯಮ 2007, ಸೆಕ್ಷನ್ 4ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆ.


ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!


ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್‌ಗಳನ್ನು ಜಪ್ತಿ ಮಾಡಲಾಗಿದೆ. 8 ಪಿಸಿಆರ್ ಪ್ರಕರಣಗಳು ದಾಖಲಾಗಿವೆ. 1 ಪ್ರಕರಣಕ್ಕೆ ಎಫ್.ಐ.ಆರ್ ದಾಖಲಾಗಿದ್ದು, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್‌ಗಳನ್ನು ಮುಚ್ಚಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Clinics: ರಾಜ್ಯದ ಕ್ಲಿನಿಕ್‌ ಗಳಿಗೆ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ
Clinics: ರಾಜ್ಯದ ಕ್ಲಿನಿಕ್‌ ಗಳಿಗೆ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ

ಇದನ್ನೂ ಓದಿ; ಇ-ಖಾತೆ ಪಡೆಯುವವರ ಗಮನಕ್ಕೆ; ನಿಮಗಿಲ್ಲಿದೆ ಮುಖ್ಯ ಮಾಹಿತಿ, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು