Thursday, June 8, 2023
Homeಇತರೆಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ನೋಟಿಸ್ ಜಾರಿ.

ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ನೋಟಿಸ್ ಜಾರಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಹೇಳಿಕೆಯನ್ನು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ನಿಂದ ಸಿಎಂಗೆ ನೋಟಿಸ್ ಜಾರಿಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿದ್ದ ಹೇಳಿಕೆ ಅವರು ಸಿಎಂ ಸ್ಥಾನಕ್ಕೆ ಬಂದಾಗ ಪ್ರಮಾಣವಚನ ಸ್ವೀಕಾರ ಸಮಯದಲ್ಲಿ ಮಾಡಿದ್ದ ಪ್ರಮಾಣಕ್ಕೆ ವಿರುದ್ಧವಾದದ್ದು ಇದರಿಂದ ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.

ಸರ್ವೋಚ್ವ ನ್ಯಾಯಾಲಯದ ಅಂತರ್ ಜಾತಿ ಹಾಗೂ ಅಂತರ್ ಧರ್ಮ ವಿವಾಹದ ರಕ್ಷಣೆ ಬಗ್ಗೆ ನೀಡಿದ ತೀರ್ಪುಗಳು ಸ್ಪಷ್ಟವಾಗಿ ‌ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಮೂಲಕ ಸಿಎಂ ತಮ್ಮ ಹೇಳಿಕೆಯನ್ನು ಹಿಂಪಡೆದಯ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಸಂವಿಧಾನದ ಮೌಲ್ಯಗಳನ್ನು ಎತ್ತುಹಿಡಿಯಲು ಕೂಡಲೆ‌ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ಶಕ್ತಿವಾಹಿಣಿ ಹಾಗೂ ತೆಹ್ಸೀನ್ ಪೂನಾವಾಲ ಪ್ರಕರಣಗಳಲ್ಲಿ ನೀಡಿದ ತೀರ್ಪುಗಳನ್ನ ತಕ್ಷಣವೇ ಜಾರಿಗೆ ತರಬೇಕೆಂದು ಒತ್ತಾಯ ಮಾಡಲಾಗಿದೆ

Most Popular

Recent Comments