CM Siddaramaiah: ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ

(CM Siddaramaiah:) ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.


ನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ


ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ


ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ. ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು.


ನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ


(CM Siddaramaiah:)ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು ನಿರ್ಧರಿಸಲಾಗಿತ್ತು. ಗುತ್ತಿಗೆದಾರರ ಬದಲಾಗಿ ನೇರ ನೇಮಕಾತಿ ಮೂಲಕ ಕನಿಷ್ಠ 17 ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ. ಪೌರಕಾರ್ಮಿಕರ ಖಾಯಂ ಗೊಳಿಸುವ ಪ್ರಕ್ರಿಯೆ‌ ಚಾಲ್ತಿಯಲ್ಲಿದೆ. ಇದಲ್ಲದೇ ಚಾಲಕರು, ಕ್ಲೀನರ್ ಗಳಿಗೆ ಕನಿಷ್ಠ‌ ವೇತನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ವಿಕಲಚೇತನರಿಗೆ ತ್ರಿಚಕ್ರ ವಾಹನ ನೀಡಲು ನಿರ್ಧರಿಸಲಾಗಿದೆ ಎಂದರು.

CM Siddaramaiah: ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ
CM Siddaramaiah: ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (CM Siddaramaiah:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?