Tuesday, November 28, 2023
Homeಸುದ್ದಿಗಳುದೇಶ' ರಾಜ್ಯದಲ್ಲಿ ಸಚಿವ ಸಂಪುಟ ರಚನೆಯು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ಸಾಗುತ್ತದೆ ' : ದೆಹಲಿಯಲ್ಲಿ...

‘ ರಾಜ್ಯದಲ್ಲಿ ಸಚಿವ ಸಂಪುಟ ರಚನೆಯು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ಸಾಗುತ್ತದೆ ‘ : ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ವಿಶ್ವಾಸದ ನುಡಿ

ನವದೆಹಲಿ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಅವರು ನೀಡುವಂತಹ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯವನ್ನು ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದವನ್ನು ಹೇಳಲು ಆಗಮಿಸಿರುವಂತಹ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ಭವನದ ಮುಂದೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಸಂಜೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಅದಕ್ಕೂ ಮುಂಚೆ ಇಂದು ಬೆಳಗ್ಗೆ ರಾಜನಾಥ್ ಸಿಂಗ್ ಅವರನ್ನು ಬೇಟಿಯಾದ ನಂತರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಮಧ್ಯಾಹ್ನ 1 ಗಂಟೆಗೆ ರಾಜ್ಯದ ರಾಜಕೀಯ ಸಂಸದರನ್ನು ಸಭೆ ಮತ್ತು ಭೋಜನಕ್ಕೆ ಆಹ್ವಾನಿಸಿದ್ದೇನೆ, ಇವತ್ತು ಇಲ್ಲಿಯೇ ಉಳಿದುಕೊಂಡು ನಾಳೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತೇನೆ ಎಂದರು.

ನoತರ ಮಾತನಾಡಿದಂತಹ ಬೊಮ್ಮಾಯಿಯವರು ರಾಜ್ಯ ಸಚಿವ ಸಂಪುಟ ರಚನೆಯು ಸುಗಮವಾಗಿ ನಡೆಯುತ್ತದೆ, ಯಾವುದೇ ಅಡ್ಡಿ-ಆತಂಕಗಳು ಬರದೆ ಉತ್ತಮವಾಗಿ ಪ್ರಕ್ರಿಯೆಯು ಸಾಗುತ್ತದೆ. ನಮ್ಮ ಪಕ್ಷವು ರಾಷ್ಟ್ರೀಯ ಪಕ್ಷವಾಗಿದೆ ಇಲ್ಲಿ ಹಲವು ಆಕಾಂಕ್ಷಿಗಳು ಇರುತ್ತಾರೆ, ಪ್ರಾದೇಶಿಕ, ಸಮುದಾಯ ಪ್ರಾತಿನಿಧ್ಯ ಎಲ್ಲವನ್ನೂ ಸರಿಯಾಗಿ ನೋಡಿಕೊಂಡು ಸಚಿವ ಸಂಪುಟದ ರಚನೆಯನ್ನು ಮಾಡಬೇಕಾಗುತ್ತದೆ ಎಂದು ಹೇಳಿದರು.

Most Popular

Recent Comments