Friday, June 9, 2023
Homeರಾಜ್ಯ" ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ" : ಸಿಎಂ ಬೊಮ್ಮಾಯಿ

” ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ” : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ‍್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನದ ಮೂಲಕ ರಾಜ್ಯಕ್ಕೆ ಹಂಚಿಕೆಯಾಗಿರುವ ನದಿಗಳ ನೀರನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳುವ ಸಂಕಲ್ಪ ನಮ್ಮದು. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದೆ.

ಕಾವೇರಿ ಜಲವಿವಾದ ನ್ಯಾಯಾಧೀಕರಣ, ಸುಪ್ರೀಂಕೋರ್ಟ್ ಆದೇಶಗಳನ್ವಯ ರಾಜ್ಯಕ್ಕೆ ಹಂಚಿಕೆಯಾಗಿರುವ ಹೆಚ್ಚುವರಿ ನೀರಿನ ಸದ್ಭಳಕ್ಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.

ನೆರೆಯ ತಮಿಳುನಾಡು ರಾಜ್ಯ ಎಷ್ಟೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಈ ಯೋಜನೆಯ ಅನುಷ್ಠಾನದಿಂದ ರಾಜ್ಯ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ91 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವುದು ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ ಯೋಜನೆಯನ್ನು ಮನೆ ಮನೆಗೆ ಗಂಗೆ ಎಂಬ ಕಾರ್ಯಕ್ರಮದಡಿ ಜಾರಿಗೊಳಿಸಲಾಗುತ್ತಿದೆ. ಈ ವರ್ಷ 25 ಲಕ್ಷ ನಳ ಸಂಪರ್ಕ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಯವರು ಹೇಳಿದ್ದಾರೆ.

 

Most Popular

Recent Comments