Saturday, December 9, 2023
Homeಸುದ್ದಿಗಳುದೇಶಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ : ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ : ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.

ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಎಂ.ವೆಕಯ್ಯನಾಯ್ಡು ಅವರನ್ನು ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಸೋಮವಾರ ಬೆಳಗ್ಗೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾರವನ್ನು ಹಾಕಿ ಮೈಸೂರು ಪೇಟವನ್ನು ತೊಡಿಸಿ ಸ್ವಾಗತಿಸಿದ್ದಾರೆ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ನಗರದ ಜವಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಭಾಗಿಯಾಗಲಿದ್ದಾರೆ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದ್ದಾರೆ.

Most Popular

Recent Comments