ಬೆಂಗಳೂರು : ಇನ್ನು ಮುಂದೆ ತಾವು ಸಂಚರಿಸುವ ರಸ್ತೆಗಳಲ್ಲಿ ಭದ್ರತೆಗಾಗಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ನೀಡಬಾರದೆಂದು ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆಯನ್ನು ನೀಡಿದ್ದಾರೆ.
ಸಭೆ ಸಮಾರಂಭಗಳಲ್ಲಿ ಹಾರಾ, ತುರಾಯಿ ಹಾಕಬಾರದೆಂದು ಸೂಚನೆಯ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ತಾವು ಮನೆಯಿಂದ ಹೊರಡುವಾಗ ಅಥವಾ ಅಧಿಕೃತ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಭದ್ರತೆಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ನೀಡಬಾರದು ಎಂದು ಸೂಚನೆಯನ್ನು ನೀಡಿದ್ದಾರೆ.
ಸಾರ್ವಜನಿಕರಿಗೆ ಝೀರೋ ಟ್ರಾಫಿಕ್ ನಿಂದ ಕಿರಿಕಿರಿಯಾಗುತ್ತಿದ್ದು, ನಾನು ಸಾಮಾನ್ಯ ಪ್ರಜೆಯಂತೆ ವಾಹನದಲ್ಲಿ ಸಂಚರಿಸುತ್ತೇನೆ. ಹೀಗಾಗಿ ನನಗೆ ಝೀರೋ ಟ್ರಾಫಿಕ್ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಹಾಗೂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ರೀತಿಯ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.