Sunday, September 24, 2023
Homeಮಲೆನಾಡು20ಕ್ಕೂ ಹೆಚ್ಚು ಕಾಡಾನೆಗಳ ಲಗ್ಗೆ; ಕಾಫಿ ತೋಟದ ಗೇಟ್‌ ಮುರಿದು, ಬೆಳೆ ಹಾನಿ

20ಕ್ಕೂ ಹೆಚ್ಚು ಕಾಡಾನೆಗಳ ಲಗ್ಗೆ; ಕಾಫಿ ತೋಟದ ಗೇಟ್‌ ಮುರಿದು, ಬೆಳೆ ಹಾನಿ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತೋಟದ ಗೇಟ್ ಮುರಿದು ಲಗ್ಗೆ ಇಟ್ಟಿವೆ. ಗ್ರಾಮದ ಧೀರಾಜ್ ಎಂಬುವವರಿಗೆ ಸೇರಿದ ಕಾಫಿ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂಧಲೆ ನಡೆಸಿವೆ.

ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?

ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

ತೋಟದ ಬಾಗಿಲು ಮುರಿದ ಕಾಡನೆಗಳು:
ಹಗಲು ರಾತ್ರಿ ಎನ್ನದೆ ಜನರು ಆತಂಕದಲ್ಲಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕೂರುವಂತಾಗಿದೆ. ಮನೆಯಲ್ಲಿ ಇರಲು ಆಗದೆ ಹೊರಗೆ ಓಡಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಅರಣ್ಯ ಇಲಾಖೆ ವಿರುದ್ಧ ತೋಟದ ಮಾಲೀಕ ಧೀರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ಆಗ್ರಹಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಕಾಡಾನೆ ಹಿಂಡು:
ಇತ್ತ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲೂ ಕಾಡಾನೆ ಕಾಣಿಸಿಕೊಂಡಿದೆ. ರಾತ್ರಿಯಾಗುತ್ತಿದ್ದಂತೆ ಸಿದ್ದಾಪುರ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು, ತಡರಾತ್ರಿ ಆನೆ ಕಂಡು ಗ್ರಾಮಸ್ಥರು ವಿಚಲಿತರಾಗಿದ್ದಾರೆ. ಬುಧವಾರ ರಾತ್ರಿ 10:30ಕ್ಕೆ ಸಿದ್ದಾಪುರದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಜನರ ಓಡಾಡ ಇಲ್ಲದ ಕಾರಣಕ್ಕೆ ಯಾವುದೇ ಅನಾಹುತವಾಗಿಲ್ಲ.

ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

Recent Comments