(Coffee Price:) ಕಾಫಿ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಕಾಫಿಪುಡಿ ಬೆಲೆ ಒಂದು ಕೆಜಿಗೆ ಸಾವಿರ ರೂಪಾಯಿ ಗಡಿಯನ್ನ ಈಗಾಗಲೇ ದಾಟಿದೆ. ದರ 1200 ರೂ,ವರೆಗೂ ಹೋಗುವ ನಿರೀಕ್ಷೆ ಇದೆ. 2022ರಲ್ಲಿ ಕೆಜಿಗೆ 300-400 ರೂಪಾಯಿ ಇದ್ದ ಕಾಫಿಪುಡಿ ಬೆಲೆ ಇದೀಗ ಏಕಾಏಕಿ ಏರಿಕೆಯಾಗಿದೆ. ಕಳೆದ ಒಂದೇ ವರ್ಷದಲ್ಲಿ ಕೆಜಿ ಕಾಫಿಪುಡಿ ಬೆಲೆ 200 ರೂಪಾಯಿವರೆಗೆ ಹೆಚ್ಚಳವಾಗಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!
ಕಾಫಿಪುಡಿ ದರ ನಿರಂತರವಾಗಿ ಏರಿಕೆ ಆಗುತ್ತಿರೋದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ಕಾಫಿಪುಡಿ ದರ ಇದೇ ರೀತಿ ಏರಿಕೆ ಆಗುತ್ತಿದ್ದರೆ, ಅನಿವಾರ್ಯವಾಗಿ ಕಾಫಿ ದರವೂ ಹೆಚ್ಚಳವಾಗಲಿದೆ. ಈಗಾಗಲೇ ಹೋಟೆಲ್ ಮತ್ತು ಕ್ಯಾಂಟೀನ್ ಗಳಲ್ಲಿ ಒಂದು ಕಾಫಿ ಬೆಲೆ 12ರಿಂದ 15 ರೂಪಾಯಿ, 15ರಿಂದ 17 ರೂಪಾಯಿ, 18ರಿಂದ 20 ರೂಪಾಯಿ ವರೆಗೆ ಏರಿಕೆ ಆಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ
ಮುಂದಿನ ತಿಂಗಳು ಮತ್ತೆ ಕೆಜಿಗೆ 150-200 ರೂಪಾಯಿ ವರೆಗೆ ಕಾಫಿಪುಡಿ ಬೆಲೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಫಿಪುಡಿ ಬೆಲೆ ಏರಿಕೆ ಕೇವಲ ವ್ಯಾಪಾರಸ್ಥರಿಗೆ ಮಾತ್ರ ನೋವು ಉಂಟುಮಾಡಿಲ್ಲ, ಕಾಫಿ ಪ್ರಿಯರಿಗೂ ಇದರ ಬಿಸಿ ತಟ್ಟಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Coffee Price:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





