ಮಂಗಳೂರು: ಕಾಲೇಜುಗಳು ಪುನರಾರಂಭಗೊoಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 600 ಮಂದಿ ವಿದ್ಯಾರ್ಥಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸೋಂಕು ತಗಲಿರುವ ವಿದ್ಯಾರ್ಥಿಗಳಲ್ಲಿ ಬಹುತೇಕರು ನೆರೆರಾಜ್ಯ ಕೇರಳದ ಮೂಲದವರೆಂದು ಹೇಳಲಾಗುತ್ತಿದೆ. ವಾರಗಳ ಹಿಂದಷ್ಟೇ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಭೌತಿಕ ತರಗತಿಗಳೂ ಕೂಡ ಆರಂಭವಾಗಿದ್ದು, ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ೨೯ ಸಂಸ್ಥೆಗಳನ್ನು ಈಗಾಗಲೇ ಕಂಟೈನ್ಮೆoಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡಯ ಕೋವಿಡ್ -19 ಗಾಗಿ ನೇಮಕಗೊಂಡಿರುವ ಜಿಲ್ಲಾ ನೋಡಲ್ ಅಧಿಕಾರಿ ಡಾ ಅಶೋಕ್ ಅವರು ಮಾತನಾಡಿ, ಪರೀಕ್ಷೆ ಹಾಗೂ ಭೌತಿಕ ತರಗತಿ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದಂತಹ ಬಹುತೇಕ ಕಾಲೇಜುಗಳಿಗೆ ನೋಟಿಸ್ ನನ್ನು ಜಾರಿಗೊಳಿಸಲಾಗಿದೆ. ಕಳೆದ ಕೆಲವು ವಾರಗಳಲ್ಲಿ ಪರೀಕ್ಷೆಗೆ ಹಾಜರಾದ ಹೆಚ್ಚಿನ ವಿದ್ಯಾರ್ಥಿಗಳು, ಕೆಲವು ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ವಿಫಲವಾದ ಕಾರಣ ಕೋವಿಡ್ ಸೋಂಕಿಗೊಳಗಾಗಿದ್ದಾರೆoದು ಹೇಳಿದ್ದಾರೆ.
ಸೋಂಕು ತಗುಲಿದಂತಹ ವಿದ್ಯಾರ್ಥಿಗಳು ತಮ್ಮ ತಮ್ಮ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಗೊಳಗಾಗಿದ್ದಾರೆ. ಕೆಲವರು ಫ್ಲ್ಯಾಟ್ ಗಳಲ್ಲಿ, ಇನ್ನೂ ಕೆಲವರು ಕೋವಿಡ್ ಕೇರ್ ಕೇಂದ್ರಗಳಲ್ಲಿದ್ದಾರೆoದು ತಿಳಿದುಬಂದಿದೆ.
ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿರುವ ಪ್ರಕಾರ ಜಿಲ್ಲೆಯಲ್ಲಿ ಈ ವರೆಗೂ ಒಟ್ಟು 620 ಮಂದಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಈಗಾಗಲೇ ಕೆಲ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ನಿಲ್ಲಿಸುವಂತೆ ಸೂಚನೆಯನ್ನೂ ನೀಡಿದೆ ಎಂದು ವರದಿಗಳು ತಿಳಿಸಿವೆ.
ವೈದ್ಯಕೀಯ ಹಿನ್ನೆಲೆಯುಳ್ಳವರಿಗೆ ಮಾತ್ರ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಮೇಲ್ವಿಚಾರಣೆಯನ್ನು ಮಾಡಲು ನಿಯೋಜನೆಗೊಳಿಸಲಾಗಿದೆ. ಸೋಂಕಿತರೊoದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಾಕಷ್ಟು ವಿದ್ಯಾರ್ಥಿಗಳು ಕ್ವಾರಂಟೈನ್ ಗೊಳಗಾಗಿಲ್ಲ. ಕ್ವಾರಂಟೈನ್ ನಲ್ಲಿರಬೇಕಾದ ವಿದ್ಯಾರ್ಥಿಗಳು ಇತರೆ ಹಾಸ್ಟೆಲ್ ಗಳಲ್ಲಿ ಇತರೆ ವಿದ್ಯಾರ್ಥಿಗಳೊಂದಿಗೆ ಒಟ್ಟಿಗೆ ಕುಳಿತು ಊಟವನ್ನು ಮಾಡುತ್ತಿದ್ದಾರೆ. ಕ್ವಾರಂಟೈನ್ ಗೊಳಗಾಗುವಂತೆ ವಿದ್ಯಾರ್ಥಿಗೆ ಸೂಚನೆ ನೀಡಿದ್ದು ಅವರೆಲ್ಲರೂ ಮನೆಗೆ ಹೋಗಿದ್ದಾರೆ. ಇದೀಗ ಶಿಕ್ಷಣ ಸಂಸ್ಥೆಯ ವಿರುದ್ಧ ದೂರನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಸಂಪರ್ಕದಲ್ಲಿದ್ದ ಅನೇಕ ವಿದ್ಯಾರ್ಥಿಗಳು ಕ್ವಾರಂಟೈನ್ ಆಗಿರಲಿಲ್ಲ. ಕ್ವಾರಂಟೈನ್‌ನಲ್ಲಿ ಇರಬೇಕಾದ ವಿದ್ಯಾರ್ಥಿಗಳು ಸಾಮಾನ್ಯ ಊಟದ ಕೊಠಡಿಯನ್ನು ಬಳಸುತ್ತಿದ್ದರು ಮತ್ತು ಅವರು ಒಂದೇ ಕಡೆ ಇರುತ್ತಿದ್ದರು. ಸಂಪರ್ಕತಡೆಯನ್ನು ಕೇಳಿದ ವಿದ್ಯಾರ್ಥಿಗಳಲ್ಲಿ ಒಬ್ಬರು ಮನೆಗೆ ಹೋಗಿದ್ದಾರೆ, ಮತ್ತು ಸಂಸ್ಥೆಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಡಾ ಅಶೋಕ್ ತಿಳಿಸಿದ್ದಾರೆ.
ಈ ನಡುವೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದ ಬಳಿಕ ಮಾತನಾಡಿರುವ, ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ರಾಜೇಂದ್ರ ಕೆ ವಿ ಅವರು, ಕೋವಿಡ್ ನೆಗೆಟಿವ್ ವರದಿ ನೀಡಿದ್ದ 900 ಮಂದಿ ವಿದ್ಯಾರ್ಥಿಗಳ ಪೈಕಿ 600 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ, ಕ್ವಾರಂಟೈನ್ ಅವಧಿಯನ್ನು ಸೂಕ್ತವಾದ ರೀತಿಯಲ್ಲಿ ಅನುಸರಣೆ ಮಾಡದೇ ಹೋದರೆ ಅವರ ವಿರುದ್ಧ ಎಫ್‌ಐಆರ್ ನನ್ನು ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.