compensation-amount:ಮನೆ ಕಳೆದುಕೊಂಡಿದ್ರೆ ಇಷ್ಟು ಹಣ ಪಾವತಿ

(compensation-amount:) ಈ ಬಾರೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಯಾಗಿದೆ. ಅಲ್ಲದೆ ಪ್ರವಾಹದಿಂದಾಗಿ ಹಲವು ಮನೆಗಳು ನೆಲಸಮ ಆಗಿದ್ದು, ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಹೌದು, ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರ ಮೊತ್ತ ನಿಗದಿಪಡಿಸಿ ಆದೇಶ ಹೊರಡಿಸಿದೆ. ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ನೀಡುವ ಕುರಿತು ಸರ್ಕಾರದ ಆದೇಶ ಹೊರಡಿಸಿದೆ. ಹಾಗಾದರೆ ಪರಿಹಾರ ಮೊತ್ತ ಎಷ್ಟು ಸಿಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ಥಿಗೆ ಕನಿಷ್ಟ 6,500/- ಗಳಿಂದ ಗರಿಷ್ಟ 50,000/- ಪಾವತಿಸಲಾಗುತ್ತದೆ. (ಮನೆ ಹಾನಿಗೊಳಗಾದ ಪ್ರಮಾಣದಲ್ಲಿ ಪರಿಹಾರ ನಿಗದಿ)


ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?


ಪರಿಹಾರ ಪಡೆಯಲು ಈ ಕೆಳಗಿನ ಅರ್ಹತೆ ಹೊಂದಿರಬೇಕು?;

  • ಅತಿವೃಷ್ಟಿ/ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಮಾವಣಿ ಕುಸಿತ (ಶೇ.75% ಕ್ಕಿಂತ ಹೆಚ್ಚು) ಹಾನಿಯಾದ ಮನೆಗಳನ್ನು ಸಂಪೂರ್ಣ ಹಾನಿಯಾದ ಮನೆಯೆಂದು ಪರಿಗಣಿಸಬೇಕು.
  • ಮನೆಹಾನಿಯ ಪ್ರಮಾಣವನ್ನು ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳು ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಬೇಕು.
  • ಭಾಗಶಃ ಮನೆ ಹಾನಿಗಾಗಿ 50,000/- ಗಳ ವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ಥರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು.
  • ಪೂರ್ಣ ಹಾನಿಯಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ 1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಹಂಚಿಕೆ ಪತ್ರವನ್ನು ಜಿಲ್ಲಾಧೀಕಾರಿಗಳ ಹಂತದಲ್ಲಿಯೇ RGRHCL ತಂತ್ರಾಂಶದ ಮೂಲಕ ವಿತರಿಸಬೇಕು.
compensation-amount:ಮನೆ ಕಳೆದುಕೊಂಡಿದ್ರೆ ಇಷ್ಟು ಹಣ ಪಾವತಿ
compensation-amount:ಮನೆ ಕಳೆದುಕೊಂಡಿದ್ರೆ ಇಷ್ಟು ಹಣ ಪಾವತಿ

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಹೊಸ ರೂಲ್ಸ್; ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಸೂಚನೆ; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?