Compensation: 17.09 ಲಕ್ಷ ರೈತ ಕುಟುಂಬಗಳಿಗೆ ಪರಿಹಾರ ಘೋಷಣೆ

(Compensation) ರಾಜ್ಯದಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸುವ ನಷ್ಟಕ್ಕೆ ರೈತ ಕುಟುಂಬಗಳಿಗೆ ಜೀವನೋಪಾಯವಾಗಿ ಪರಿಹಾರ ನೀಡಲು ಸರ್ಕಾರದ ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


17.09 ಲಕ್ಷ ರೈತರಿಗೆ ಪರಿಹಾರ:
ರಾಜ್ಯದಲ್ಲಿ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.


ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!;  ಭರ್ಜರಿ ಸಂಬಳ.. ಅರ್ಹತೆಗಳೇನು..?


ಕೇಂದ್ರ ಸರ್ಕಾರದಿಂದ NDRF ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳ ಮೊದಲ ವಾರದಲ್ಲೆವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರ್ಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆಂದು ತಿಳಿಸಿದರು.

Compensation: 17.09 ಲಕ್ಷ ರೈತ ಕುಟುಂಬಗಳಿಗೆ ಪರಿಹಾರ ಘೋಷಣೆ
Compensation: 17.09 ಲಕ್ಷ ರೈತ ಕುಟುಂಬಗಳಿಗೆ ಪರಿಹಾರ ಘೋಷಣೆ

ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು