Computer DTP: ಬಿಪಿಎಲ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ

(Computer DTP) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ತರಬೇತಿ ಯಾವಾಗ ಪ್ರಾರಂಭ:
45 ದಿನಗಳ ಉಚಿತ ತರಬೇತಿಯು 2024ರ ಡಿಸೆಂಬರ್ 18 ರಿಂದ ಆರಂಭವಾಗಲಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರು ಡಿಸೆಂಬರ್ 18 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ʼನ್ನು ಕಡ್ಡಾಯವಾಗಿ ಹೊಂದಿರಬೇಕು.


ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ


ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380162042, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ.

Computer DTP: ಬಿಪಿಎಲ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ
Computer DTP: ಬಿಪಿಎಲ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ

ಇದನ್ನೂ ಓದಿ; ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು