Computer Literacy Test: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್

(Computer Literacy Test:) ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಸೇವಾ ನಿಯಮಗಳ ಪ್ರಕಾರ ಕಡ್ಡಾಯವಾಗಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (Computer Literacy Test – CLT) ಪಾಸಾಗಲು ನೀಡಲಾಗಿದ್ದ ಗಡುವನ್ನು ಮತ್ತೊಂದು ವರ್ಷ ವಿಸ್ತರಿಸಲಾಗಿದೆ.


ನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈ ಮೊದಲು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು 2025 ಡಿಸೆಂಬರ್ 31ರವರೆಗೆ ಸಮಯ ನೀಡಲಾಗಿತ್ತು. ಆದರೆ ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಹೊಸ ಅಧಿಸೂಚನೆಯ ಪ್ರಕಾರ, ಈ ಗಡುವನ್ನು 2026 ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012ಕ್ಕೆ ತಿದ್ದುಪಡಿ ತಂದಿದ್ದು, ಹೊಸ ನಿಯಮವನ್ನು ‘ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2026 ಎಂದು ಹೆಸರಿಸಲಾಗಿದೆ.


ನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.


ರಾಜ್ಯಪಾಲರ ಆದೇಶಾನುಸಾರ, ಡಿಪಿಎಆರ್ (ಸೇವಾ ನಿಯಮಗಳು–3) ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರತಿಭಾ ಕೆ. ಅವರು ಮಾರ್ಚ್ 6, 2026ರಂದು ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ, ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯದ ಪ್ರಮುಖ ಅಧಿಕಾರಿಗಳಿಗೆ ರವಾನಿಸಲಾಗಿದೆ. ಈ ತೀರ್ಮಾನದಿಂದ ಇನ್ನೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿರುವ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ವರ್ಷದ ಹೆಚ್ಚುವರಿ ಅವಕಾಶ ದೊರಕಿದಂತಾಗಿದೆ.

Computer Literacy Test: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್
Computer Literacy Test: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Computer Literacy Test:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ