Condiments: ಬೇಕರಿ, ಕಾಂಡಿಮೆಂಟ್ಸ್ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ

(Condiments:) ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ.


ಇದನ್ನೂ ಓದಿ: 36,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


(Condiments:) ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017ರಡಿಯಲ್ಲಿ ನೋಂದಣಿ:
ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಿದ ಇಲಾಖೆ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್​ ನೀಡಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!


(Condiments:) ಜಿಎಸ್​ಟಿ ನೋಂದಣಿ ಕಡ್ಡಾಯ:
ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿಎಸ್​ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.

40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್​ ಜಾರಿಗೊಳಿಸಲಾಗಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು.


ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಗಮನಕ್ಕೆ; ಗೌರವಧನ ಪಾವತಿಗೆ ಅನುದಾನ ಬಿಡುಗಡೆ


ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕು. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ಮುಂದೆ ಶೇ 1 ರಷ್ಟು ತೆರಿಗೆ ಪಾವತಿಸಬಹುದಾಗಿದೆ.

Condiments: ಬೇಕರಿ, ಕಾಂಡಿಮೆಂಟ್ಸ್ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ
Condiments: ಬೇಕರಿ, ಕಾಂಡಿಮೆಂಟ್ಸ್ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Condiments:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ