ಮಂಗಳೂರು: ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತಹ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದಂತಹ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ.
ಮಂಗಳೂರಿನ ಯೆನೇಪೋಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಫರ್ನಾಂಡಿಸ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದೊಂದು ತಿಂಗಳ ಹಿಂದೆ ಮನೆಯಲ್ಲಿ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡಿಸ್‌ರವರ ಮೆದುಳಿಗೆ ತೀವ್ರವಾಗಿ ಏಟು ಬಿದ್ದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದರು. ಕಳೆದೆರಡು ದಿನಗಳ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ನೀಡಿ ಫರ್ನಾಂಡಿಸ್ ರವರ ಆರೋಗ್ಯವನ್ನು ವಿಚಾರಿಸಿದ್ದರು.