ಅಫಜಲಪುರ: ಕಾಂಗ್ರೆಸ್ ಪಕ್ಷದಲ್ಲಿರುವ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸತ್ತ ಅಲ್ಲಿನ ಕೆಲವು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ ತಿಳಿಸಿದರು.
4ರ ಮುಸ್ಲಿಂ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಆಡಳಿತ ಯಂತ್ರ ಕುಸಿದಿದೆ. ಯಾರೊಬ್ಬರಿಗೂ ಜನಪ್ರತಿನಿಧಿಗಳ ಮೇಲೆ ನಂಬಿಕೆ ಇಲ್ಲದಂತಾಗಿದೆ. ಅಲ್ಲದೇ ತಾಲೂಕಿನ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು ಮಾತ್ರ ನಿತ್ಯ ಬೆಳಕಿಗೆ ಬರುತ್ತಿದ್ದಾರೆ. ಹೀಗಾಗಿ ಅನೇಕ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಮುಖಂಡ ಶಿವಕುಮಾರ ನಾಟಿಕಾರ ಮಾತನಾಡಿ, ಶಾಸಕ ಎಂ.ವೈ. ಪಾಟೀಲ ನವರಿಗೆ ವಯಸ್ಸಾಗಿದೆ. ಅವರಿಂದ ಕ್ಷೇತ್ರದಲ್ಲಿ ಸಂಚಾರ ಮಾಡಲಾಗುವುದಿಲ್ಲಅಧಿಕಾರಿಗಳು ಅವರ ಅಧೀನದಲ್ಲಿ ಇಲ್ಲ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮನ್ಸೂರ ಪಟೇಲ್, ಅಮರಸಿಂಗ್ ರಜಪೂತ, ಶ್ರೀಶೈಲಗೌಡ ಮಾಲಿಪಾಟೀಲ, ಯೂಸೂಫ ಭಾಗವಾನ, ಗೌಸ್ ಹಳ್ಯಾಲ, ಮೈಬೂಬ್ ಜೋಗೂರ, ಶಬ್ಬೀರ ದಿಕ್ಸಂಗಿ, ಸಾದೀಕ್ ಚೌಧರಿ, ಅಶೋಕ ದೊಡ್ಮನಿ ಮುಂತಾದವರು ಇದ್ದರು.