Sunday, December 3, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಪಕ್ಷದ ಮೊದಲ ಭರವಸೆಯಾದ ಶಕ್ತಿ ಯೋಜನೆಯಿಂದ ಉಂಟಾಗುವ ತೊಂದರೆಯಿಂದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ; ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ

ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಶಾಲಾ ಕಾಲೇಜ್ ಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಉಚಿತ ಬಸ್ ಸೇವೆಯಿಂದಾಗಿ ಗ್ರಾಮಾಂತರ ಬಸ್ ಗಳು ಹೌಸ್ ಪುಲ್ ಆಗುತ್ತಿದೆ. ಬಸ್ ಗಳಿಗೆ ಹತ್ತಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬೆಳಗ್ಗೆ-ಸಂಜೆ ಬಸ್ ಗಳ ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ; ಚಿಕ್ಕಮಗಳೂರು: ಪರಿಸರವಾದಿ ಪ್ರದೀಪ್ ಗೌಡ ಮನೆಯಲ್ಲಿ ಕಳ್ಳತನ

ಚಿಕ್ಕಮಗಳೂರು: ಪರಿಸರವಾದಿ ಪ್ರದೀಪ್ ಗೌಡ ಮನೆಯಲ್ಲಿ ಕಳ್ಳತನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕೋಟೆಯ ಚೆನ್ನಪುರ ರಸ್ತೆಯಲ್ಲಿರುವ ಪರಿಸರವಾದಿ ಪ್ರದೀಪ್ ಗೌಡ ಅವರ ಮನೆಯಲ್ಲಿ ನಡೆದಿದೆ.

ಇದನ್ನೂ ಓದಿ; ನರಸಿಂಹರಾಜಪುರ: ಶಾಲೆಯ ಸಮಸ್ಯೆ ಹೇಳಿಕೊಳ್ಳಲು ಪಾನಮತ್ತರಾಗಿ ಬಂದಿದ್ದ ಪ್ರಾಂಶುಪಾಲ; ಶಾಸಕ ಟಿ.ಡಿ ರಾಜೇಗೌಡ ತರಾಟೆ

ಮನೆಯಲ್ಲಿ ಯಾರು ಇಲ್ಲದ ವೇಳೆ ಕಿರಾತಕರು ಕಳ್ಳತನ ಮಾಡಿದ್ದು, 50 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ, ಒಂದು ಲ್ಯಾಪ್ ಟಾಪ್ ಸೇರಿದಂತೆ 1 ಲಕ್ಷದ 20 ಸಾವಿರ ಹಣವನ್ನು ಕಳ್ಳರು ದೋಚಿದ್ದಾರೆ.

ಇನ್ನು ಈ ಬಗ್ಗೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

Recent Comments