ಹುಬ್ಬಳ್ಳಿ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಂದು ಸ್ಥಾನದಲ್ಲಿ ಗೆದ್ದಿದ್ದಕ್ಕೆ ಅಹಂಕಾರದಿಂದ ಬೀಗುತ್ತಿದೆ. ಕಾಂಗ್ರೆಸ್ಸರಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ತಕ್ಕ ತಿರುಗೇಟು ನೀಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀ ರಾಮುಲು ಹೇಳಿದರು.
ಶುಕ್ರವಾರ ಶ್ರೀನಿವಾಸ ಗಾರ್ಡನ್ ನಲ್ಲಿ ನಡೆದ ಬಿಜೆಪಿ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಈ ಹಿಂದೆ ನಡೆದ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆಲುವನ್ನು ಸಾಧಿಸಿದ್ದಕ್ಕೆ ಕಾಂಗ್ರೆಸ್ ಅಹಂಕಾರದಿಂದ ಬೀಗುತ್ತಾ ಬಂದಿದೆ, ಈ ಕಾಂಗ್ರೆಸ್ ಪಕ್ಷದವರಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆಗಳಲ್ಲಿ ಹೇಳಿಕೆಯನ್ನು ನೀಡಲು ಮಾತ್ರ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ, ಅವರ ನಾಯಕ ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಆದ್ದರಿಂದ ಅವರು ಚುನಾವಣೆಯ ವೇಳೆಯಲ್ಲಿ ಮಾತ್ರ ಕಾಣಿಸುತ್ತಾರೆ ಎಂದು ವ್ಯಂಗ್ಯ ಮಾಡಿದರು.
ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ. ಗೆಲುವನ್ನು ಸಾಧಿಸುತ್ತದೆ. ಕಾಂಗ್ರೆಸ್ ಗೆ ಸಾಮರ್ಥ್ಯವಿದ್ದರೆ ನಮಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.