Monday, December 11, 2023
Homeಮಲೆನಾಡುಚಿಕ್ಕಮಗಳೂರುಎನ್.ಆರ್.ಪುರ: ಕ್ಷೇತ್ರದ ಮತದಾರರು ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ- ಸುಧಾಕರ್ ಎಸ್ ಶೆಟ್ಟಿ

ಎನ್.ಆರ್.ಪುರ: ಕ್ಷೇತ್ರದ ಮತದಾರರು ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ- ಸುಧಾಕರ್ ಎಸ್ ಶೆಟ್ಟಿ

ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿಗಳನ್ನು ಉಚಿತವಾಗಿ ನೀಡುವುದಾಗಿ ಭರವನೆಯನ್ನು ನೀಡಿ ಮತದಾರರನ್ನು ಓಲೈಸಿ ಮತ ಪಡೆದಿದ್ದಾರೆ. ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದಂತೆ ಯಾವುದೇ ಷರತ್ತಿಗಳಿಲ್ಲದೆ 5 ಗ್ಯಾರಂಟಿಗಳನ್ನು ರಾಜ್ಯದ ಎಲ್ಲಾ ಜನರಿಗೂ ನೀಡಬೇಕು ಎಂದು ಜೆಡಿಎಸ್ ಪಕ್ಷದ ಪರಾಜಿತ ಅಭ್ಯರ್ಥಿ ಸುಧಾಕರ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!

ಇದನ್ನೂ ಓದಿ; ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ಷೇತ್ರದ ಮತದಾರರು ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಗ್ಯಾರಂಟಿಗಳಾದ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ, ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಎಲ್ಲಾ ಮಹಿಳೆಯರಿಗೂ ಉಚಿತ ಪಾಸ್, ಎಲ್ಲಾ ಪದವೀದರರಿಗೂ 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಚುನಾವಣೆ ನಡೆದು 20 ದಿನ ಕಳೆದುಹೋಗಿದೆ. ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಗ್ಯಾರಂಟಿ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಮಾತು ಉಳಿಸಿಕೊಳ್ಳಲು ವಿಫಲವಾಗಿದ್ದೀರಿ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ಶೃಂಗೇರಿ ಕ್ಷೇತ್ರದ ಜೆಡಿಎಸ್ ಘಟಕ ಕಾದು ನೋಡುತ್ತಿದೆ. ಭರವಸೆಗಳನ್ನು ಈಡೇರಿಸದಿದ್ದರೆ ಜೆಡಿಎಸ್ ಪಕ್ಷವು ಸುಮ್ಮನೆ ಕುಳಿತುಕೊಳ್ಳದೆ ಹೋರಾಟದ ಹಾದಿ ಹಿಡಿಯಲಿದೆ ಎಂದರು.

ಇದನ್ನೂ ಓದಿ; ನಕ್ಸಲರಿಗಿಂತ ಸಿ.ಟಿ ರವಿಯೇ ಡೇಂಜರ್

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

Most Popular

Recent Comments