Monday, December 11, 2023
Homeಮಲೆನಾಡುಚಿಕ್ಕಮಗಳೂರುಶೃಂಗೇರಿ: ಈ ಊರಿಗೆ ಬಸ್ಸೇ ಇಲ್ಲ.. ಆದ್ರೂ ಬಸ್ ಸ್ಟಾಪ್ ನಿರ್ಮಾಣ, ಸ್ಥಳೀಯರ ಆಕ್ರೋಶ

ಶೃಂಗೇರಿ: ಈ ಊರಿಗೆ ಬಸ್ಸೇ ಇಲ್ಲ.. ಆದ್ರೂ ಬಸ್ ಸ್ಟಾಪ್ ನಿರ್ಮಾಣ, ಸ್ಥಳೀಯರ ಆಕ್ರೋಶ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಪಟ್ಟಣಕ್ಕೆ 5 ಕಿ.ಮೀ ದೂರವಿರುವ ಕೂತಗೋಡು ಗ್ರಾಪಂ ವ್ಯಾಪ್ತಿಯ ತೆಕ್ಕೂರು ಸಮೀಪದ ಬೆಟ್ಟಗೇರಿ ಬಳಿ ನೂತನವಾಗಿ 2 ಲಕ್ಷ ರೂ ವೆಚ್ಚದಲ್ಲಿ ಬಸ್ ತಂಗುದಾಣ ನಿರ್ಮಾಣವಾಗುತ್ತಿದ್ದೆ, ಆದರೆ ಬಸ್ ಸಂಚಾರವೇ ಇಲ್ಲ ಊರಿಗೆ ತಂಗುದಾಣ ಯಾಕೆ ಎಂಬುದು ಕೂತಗೋಡು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರ ದೂರಾಗಿದೆ.

ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ಠಾಣೆಗೆ ಹೈಟೆಕ್ ರೂಪ ಕೊಟ್ಟ ಪಿ.ಎಸ್.ಐ ಪವನ್

ಇದನ್ನೂ ಓದಿ; ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ

ಹೌದು ಕಳೆದ 2-3 ವರ್ಷದಿಂದ ಈ ಭಾಗಕ್ಕೆ ಬಸ್ ಸಂಚಾರವೇ ಇಲ್ಲ, 2019ರಲ್ಲಿ ಕೊರೊನಾ ಬಂದ ಮೇಲೆ ಬಸ್‌ಗಳ ಸಂಚಾರವನ್ನೇ ಸ್ಥಗಿತಗೊಳಿಸಲಾಗಿದೆ. ಈ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಾಲಾ ಬಸ್ಸನ್ನು ಹಾಗೂ ಆಟೋ ರಿಕ್ಷವನ್ನೇ ಅವಲಂಬಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಈ ಹಿಂದೆ ಬೆಳಗಿನ ಜಾವ 5.30ಕ್ಕೆ ಈ ಭಾಗದಿಂದ ಶಿವಮೊಗ್ಗಕ್ಕೆ ತೆರಳುವ ಖಾಸಗಿ ಬಸ್ ಬಹಳ ವರ್ಷಗಳಿಂದ ಸಂಚರಿಸುತ್ತಿತ್ತು. ಶಿವಮೊಗ್ಗದಿಂದ ಸಂಜೆ ಇಲ್ಲಿಗೆ ಬಂದು ಬೆಳಗ್ಗಿನ ಜಾವ ಇಲ್ಲಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಇದರಿಂದ ಶಿವಮೊಗ್ಗಕ್ಕೆ ಹೋಗಿ ಬರುವವರಿಗೆ ಬಹಳ ಅನುಕೂಲವಾಗುತ್ತಿತ್ತು. ನಂತರ ಬೆಳಗ್ಗೆ 9 ಗಂಟೆಗೆ ಹಾಗೂ ಸಂಜೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಹೋಗಿ ಬರಲು ಬಸ್ ಸೌಲಭ್ಯವಿತ್ತು. ಆದರೆ ಈಗ ಯಾವ ಬಸ್ ಇಲ್ಲದೆ ಇರುವುದರಿಂದ ಜನರು ಮಾತ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಈ ಭಾಗದ ಜನರಿಗೆ ಉಪಯೋಗವಾಗುವಂತೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಆದರೆ ಬಸ್ ಸಂಚಾರವೇ ಇಲ್ಲ ಊರಿಗೆ ಬಸ್ ಸಂಚಾರ ಸೌಲಭ್ಯ ಕಲ್ಪಿಸುವ ಬದಲು ಬಸ್ ತಂಗುದಾಣ ಮಾತ್ರ ನಿರ್ಮಾಣ ಮಾಡಲು ಹೊರಟಿದೆ. ಈ ಹಿಂದೆ ಇಲ್ಲಿ ಬಸ್ ತಂಗುದಾಣವಿದ್ದು, ಅದು ಶಿಥಿಲಾವಸ್ಥೆಗೆ ತಲುಪಿತ್ತು, ಬಸ್ ಸಂಚಾರವಿಲ್ಲದಿರುವ ಸ್ಥಿತಿಯಲ್ಲಿ ಈಗ ನಮಗೇಕೆ ಬಸ್ ತಂಗುದಾಣ ಎಂದು ಜನ ಪ್ರಸುತ್ತಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿ ಕೊಡುತ್ತಾರಾ ಎಂದು ಕಾದು ನೋಡಬೇಕಿದೆ.

ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಶೃಂಗೇರಿಗೆ ಬೇಟಿ ನೀಡಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನವನ್ನು ಪಡೆದರು.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಜನಾರ್ದನ ರೆಡ್ಡಿಯ ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನದ ಅಂಗವಾಗಿ ಅಕ್ಷರಾಭ್ಯಾಸ ಮಾಡಿಸಿ, ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಶೃಂಗೇರಿಯ ನರಸಿಂಹವನದಲ್ಲಿ ಸನ್ನಿಧಾನ ಶ್ರೀ ಶ್ರೀ ಜಗದ್ಗುರು ವಿಧುಶೇಖರ ಭಾರತಿಗಳ ದರ್ಶನ ಪಡೆದು, ಹಲವಾರು ವಿಚಾರಗಳನ್ನು ಚರ್ಚಿಸಿ ಆಶೀರ್ವಾದ ಪಡೆದಿದ್ದು ನನ್ನ ಪೂರ್ವಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ. ಶೃಂಗೇರಿ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಗೌರಿ ಶಂಕರ್ ಅವರನ್ನು ಈ ಸಂದರ್ಭದಲ್ಲಿ ನೆನೆಯುತ್ತಿದ್ದೇನೆ. ಶೃಂಗೇರಿ ಮಠದ ಬಳ್ಳಾರಿ ಶಾಖೆಯ ಮಠಾಧಿಕಾರಿ ಶ್ರೀ ಬಿ.ಕೆ.ಬಿ.ಎನ್.ಮೂರ್ತಿ ಹಾಗೂ ಶ್ರೀ ಮೋಹನ್ ಶಾಸ್ತ್ರಿ ಅವರ ಸಹಕಾರಕ್ಕಾಗಿ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.
ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದ ಕೋರ್ಟ್:

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ 2023 ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

Most Popular

Recent Comments