Tuesday, November 28, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ; ಬೃಹತ್ ಗಾತ್ರದ ಹಲಸಿನ ಮರ ಬಿದ್ದು ನೆಲಕಚ್ಚಿದ...

ಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ; ಬೃಹತ್ ಗಾತ್ರದ ಹಲಸಿನ ಮರ ಬಿದ್ದು ನೆಲಕಚ್ಚಿದ ಕೊಟ್ಟಿಗೆ, ಕಾಲುಸಂಕ ಮುಳುಗಡೆ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಧರೆ ಕುಸಿತ ಉಂಟಾಗಿದೆ. ಮರಗಳು ಧರೆಗುರುಳಿದ್ದು, ಕಾಲುಸಂಕ ಮುಳುಗಡೆಯಾಗಿದೆ.

ಇದನ್ನೂ ಓದಿ; ಗಮನಿಸಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹೀಗಿದೆ 07-07-2023

ಹಲಸಿನ ಮರ ಬಿದ್ದು ನೆಲಕಚ್ಚಿದ ಕೊಟ್ಟಿಗೆ:
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಸಮೀಪದ ಮಡುವಿನಕೆರೆ ಗ್ರಾಮದಲ್ಲಿ ಮಳೆ, ಗಾಳಿಗೆ ಮನೆಯ ಮೇಲೆ ಬೃಹತ್ ಗಾತ್ರದ ಹಲಸಿನ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ನಾರಾಯಣ ಎಂಬುವರ ಕೊಟ್ಟಿಗೆ ಸಂಪೂರ್ಣ ನೆಲಕಚ್ಚಿದ್ದು, ಮನೆಯ ಅರ್ಧ ಭಾಗಕ್ಕೆ ಹಾನಿಯಾಗಿದೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಕಾಲುಸಂಕ ಮುಳುಗಡೆ:
ಭದ್ರಾ ನದಿಯ ಹರಿವಿನಲ್ಲಿ ಹೆಚ್ಚಳ ಉಂಟಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗನಹಳ್ಳ ಗ್ರಾಮದ ಕಾಲುಸಂಕ ಸಂಪೂರ್ಣ ಮುಳುಗಡೆಯಾಗಿದೆ. ಪರಿಣಾಮ ಶಾಲಾ ಮಕ್ಕಳು, ವೃದ್ಧರು, ತೋಟದ ಕಾರ್ಮಿಕರಿಗೆ ತೊಂದರೆಯಾಗಿದೆ. ಕಗ್ಗನಹಳ್ಳದಿಂದ ಹೊಳಲು, ಬಾಳೆಹೊಳೆ ಎಸ್ಟೇಟ್, ಬಿಳುಗೂರು, ಬರ್ಗಲ್, ಹೆಮ್ಮಕ್ಕಿ, ಗಬ್ಬಲ್ ಗ್ರಾಮಗಳ ಸಂಪೂರ್ಣ ಸಂಪರ್ಕ ಕಡಿತವಾಗಿದೆ. ಕಳೆದ ಕೆಲ ವರ್ಷಗಳಿಂದ ಈ ಭಾಗಕ್ಕೆ ಸೇತುವೆ ಮಾಡಿಕೊಡಿ ಎಂದು ಗ್ರಾಮಸ್ಥರು ಮನವಿ ಸಲ್ಲಿಸುತ್ತಿದ್ದರೂ ಸಹ ಜಿಲ್ಲಾಡಳಿತ ಹಾಗೂ ಜನ ಪ್ರತಿನಿಧಿಗಳು ಮಾತ್ರ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಇನ್ನಾದರೂ ಈ ಭಾಗಕ್ಕೆ ಸೇತುವೆ ಮಾಡಿಕೊಡಿ ಎಂದು ಗ್ರಾಮದ ಜನರ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಪತಿಯ ಪ್ರಿಯತಮೆಯಿಂದಲೇ ನಡೀತಾ ಪತ್ನಿಯ ಭೀಕರ ಕೂಲೆ?

ಅಂಗಡಿ ಹಾಗೂ ಮನೆಗಳ ಮೇಲೆ ಉರುಳಿ ಬಿದ್ದ ಮರ:
ಸತತವಾಗಿ ಸುರಿದ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹೆಗ್ಗಾರು ಕುಡಿಗೆಯಲ್ಲಿ ಅಂಗಡಿ ಹಾಗೂ ಮನೆಗಳ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಹಾರೂನ್ ಕಲಂದರ್ ಅವರಿಗೆ ಸೇರಿದ ಮನೆ ಹಾಗೂ ಅಂಗಡಿ ಮಳಿಗೆ ಇದಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮನೆ ಹಾಗೂ ಅಂಗಡಿ ಮಳಿಗೆಗಳು ಹಾನಿ ಗೋಳಗಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆರ್ ಐ ಸುಧೀರ್ ಭೇಟಿ ನೀಡಿದ್ದಾರೆ.

ಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಸರ್ಕಾರಿ ಬಸ್ಸುಗಳ ನಡೆವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. 2019 ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯದೇ ಇರದ ಕಾರಣ ಈ ಅಪಘಾತ ಸಂಭವಿಸಿದ್ದು, ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಲಾಗಿದೆ. ಹಾಗೂ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣ ಎನ್ನಲಾಗಿದೆ. ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಅಡಿ ದೂರದಲ್ಲಿ ಇರುವವರು ಕಾಣದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಅಪಘಾತದಿಂದ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಘಾಟಿಯಲ್ಲಿ ಸಿಲುಕಿ ವಾಹನ ಸವಾರರ ಪರದಾಡುವಂತೆ ಆಗಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

Most Popular

Recent Comments