(Cooking oil price:) ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕ ಮಾರುಕಟ್ಟೆಯ ಮೇಲೂ ಬಿದ್ದಿದ್ದು, ಅದರ ಪ್ರಭಾವ ಭಾರತದಲ್ಲೂ ಕಾಣಿಸಿಕೊಳ್ಳುತ್ತಿದೆ. ಈ ಆರ್ಥಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ Narendra Modi ದೇಶದ ಜನತೆಗೆ ಮಿತ ವ್ಯಯ ಮತ್ತು ತ್ಯಾಗದ ಸಂದೇಶ ನೀಡಿದ್ದಾರೆ. ಅದರ ಭಾಗವಾಗಿ ಗೃಹಿಣಿಯರು ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಈ ಕರೆಯ ಬೆನ್ನಲ್ಲೇ ಬೆಂಗಳೂರಿನ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ವಿವಿಧ ಬ್ರ್ಯಾಂಡ್‌ಗಳ ಅಡುಗೆ ಎಣ್ಣೆ ದರದಲ್ಲಿ ಲೀಟರ್‌ಗೆ 3ರಿಂದ 5 ರೂಪಾಯಿ ವರೆಗೆ ಕಡಿಮೆಯಾಗಿದೆ. ಟಿನ್‌ಗಳಿಗೆ 30ರಿಂದ 40 ರೂಪಾಯಿ ವರೆಗೆ ದರ ಇಳಿದಿರುವುದು ಗ್ರಾಹಕರಿಗೆ ಸ್ವಲ್ಪ ನೆಮ್ಮದಿ ತಂದಿದೆ.
ವ್ಯಾಪಾರಿಗಳ ಪ್ರಕಾರ ಅಡುಗೆ ಎಣ್ಣೆಯ ಆಮದು ಪ್ರಮಾಣ ಸುಧಾರಣೆಯಾಗಿರುವುದು, ಪೂರೈಕೆ ಹೆಚ್ಚಳ ಹಾಗೂ ಪ್ರಧಾನಿ ಮೋದಿ ಅವರ ಕರೆ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಆರೋಗ್ಯದ ದೃಷ್ಟಿಯಿಂದಲೂ ಎಣ್ಣೆ ಬಳಕೆಯನ್ನು ಮಿತಿಗೊಳಿಸುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಡುಗೆ ಎಣ್ಣೆ ಹೊಸ ದರ ವಿವರ
ಪಾಮ್ ಆಯಿಲ್ 141
ಸನ್ ಪ್ಯೂರ್ 167
ಕಡಲೆಕಾಯಿ ಎಣ್ಣೆ 185
ಇನ್ನೊಂದೆಡೆ ಅಕ್ಕಿ ಬೆಲೆ ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಳಿತ ಸಾಮಾನ್ಯ ಜನರ ಬದುಕಿನ ಮೇಲೂ ಪರಿಣಾಮ ಬೀರುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Cooking oil price:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply