Sunday, December 3, 2023
Homeಇತರೆರಾಜ್ಯದಲ್ಲಿ ಲಾಕ್ ಡೌನ್ ಆಗುವ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರೋಗ್ಯ ಸಚಿವ ಕೆ ಸುಧಾಕರ್

ರಾಜ್ಯದಲ್ಲಿ ಲಾಕ್ ಡೌನ್ ಆಗುವ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರೋಗ್ಯ ಸಚಿವ ಕೆ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುವುದರ ಬಗ್ಗೆ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿರುವ ಮಾಧ್ಯಮಗಳಿಗೆ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ ಎಂದು ಅರೋಗ್ಯ ಸಚಿವ ಆರ್. ಸುಧಾಕರ್ ಹೇಳಿದ್ದಾರೆ.

ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರವೇ ನಿಖರ ಮಾಹಿತಿಯನ್ನು ಲಾಕ್ ಡೌನ್ ಬಗ್ಗೆ ಹೇಳುವ ತನಕ ಜನರು ಸುಳ್ಳು ಸುದ್ದಿಯನ್ನು ನಂಬಿ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ವೇಗವಾಗಿ ಹರಡಲು ಪುನಃ ಶುರುವಾಗಿರುವುದರಿಂದ ಮತ್ತೆ ಲಾಕ್ ಡೌನ್ ಆಗುವುದರ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹೊರಡಿಸಲಾಗಿತ್ತು. ಕೆಲವು ಮಾಧ್ಯಮಗಳು ಲಾಕ್ ಡೌನ್ ಬಗ್ಗೆ ವರದಿ ನೀಡಿದ್ದರಿಂದ ಜನರಲ್ಲಿ ಆತಂಕ ಮೂಡಿದ್ದರಿಂದ ಸಚಿವರು ಮಾಧ್ಯಮದವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡುವ ಸುದ್ದಿ ಮಾಧ್ಯಮಗಳಿಗೆ ಸರ್ಕಾರ ಅಧಿಕೃತ ಮಾಹಿತಿಯನ್ನು ನೀಡುವ ತನಕ ಸುಳ್ಳು ಮಾಹಿತಿಯನ್ನು ನೀಡಿದರೆ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Most Popular

Recent Comments