ಬೆಂಗಳೂರು: ವಿಶ್ವದ ಹಲವು ದೇಶಗಳಲ್ಲಿ ಕೊರೋನಾ ಮೂರನೇ ಅಲೆ ಶುರುವಾಗಿರುವುದರಿಂದ 10 ದೇಶಗಳಿಂದ ನಮ್ಮ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಕಠಿಣ ನಿರ್ಬಂಧವನ್ನು ಹೊರಡಿಸಿದೆ.
ಕೊರೋನಾ ಮೂರನೇ ಅಲೆ ಕಾಣಿಸಿಕೊಂಡಿರುವಂತಹ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಚೀನಾ, ಮ್ಯಾರೀಷಸ್, ನ್ಯೂಜಿಲೆಂಡ್, ಜಿಂಬಾಬ್ವೆ ಮತ್ತು ಬೊಸ್ಟಾವನ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬರುವವರು ಎರಡು ಡೋಸ್ ಲಸಿಕೆಯನ್ನು ಪಡೆದಿದ್ದರೂ ವಿಮಾನ ನಿಲ್ದಾಣದಲ್ಲಿ RTPCR ಪರೀಕ್ಷೆಗೆ ಒಳಪಡಬೇಕು ನಂತರ 7 ದಿನಗಳು ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಆದೇಶವನ್ನು ಹೊರಡಿಸಿದ್ದಾರೆ.
WHO ಅನುಮೋದನೆಯನ್ನು ಹೊಂದಿದ ಎರಡು ಲಸಿಕೆಯನ್ನು ಪಡೆದಿರುವ ಉಭಯ ದೇಶಗಳ ಪ್ರಯಾಣಿಕರನ್ನು ಯಾವುದೇ ನಿರ್ಬಂಧಗಳಿಲ್ಲದೆ ಬರ ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುವ ದೇಶಗಳಾದ ಫ್ರಾನ್ಸ್, ಜರ್ಮನಿ, ನೇಪಾಳ, ಬೆಲಾರಸ್, ಲೆಬನಾನ್, ಅಮೆನಿಯಾ, ಉಕ್ರೆನ್, ಬೆಲ್ಜಿಯಂ, ಸೇರ್ಬಿಯಾ, ದೇಶಗಳಿಗೆ ಎರಡು ಡೋಸ್ ಲಸಿಕೆ ಪಡೆದಿದ್ದರೆ ಕಡ್ಡಾಯ ಹೋಂ ಕ್ವಾರಂಟೈನ್ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಕ್ಕೆ ಬರುವಂತಹ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಏಕಾಏಕಿ ನಿರ್ಬಂಧವನ್ನು ವಿಧಿಸಿರುವುದರಿಂದ ಅ.25 ರಂದು ಸರ್ಕಾರ ಆದೇಶವನ್ನು ಹೊರಡಿಸಿದ್ದು ಬಹುತೇಕರಿಗೆ ನೂತನ ಮಾರ್ಗಸೂಚಿ ತಲುಪದೇ ಇರುವುದರಿಂದ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಮತ್ತೊಮ್ಮೆ ಪರೀಕ್ಷೆಗೆ ಒಳಪಡಬೇಕು ಹಾಗೂ ನೆಗೆಟಿವ್ ಬಂದರೂ ಮನೆಯಲ್ಲಿ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕು ಎಂಬುದನ್ನು ತಿಳಿದು ಪ್ರಯಾಣಿಕರು ಆರೋಗ್ಯ ಇಲಾಖೆ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಜತೆಗೆ ವಾಗ್ವಾದ ನಡೆಸಿದರು.